ದಾವಣಗೆರೆ | ಮಳಿಗೆ ಮರುಹರಾಜು ನೆಡೆಸದ ಕ್ರೀಡಾಇಲಾಖೆ, ಅಂಬೇಡ್ಕರ್ ವೃತ್ತದಲ್ಲಿ ಜಯಕರ್ನಾಟಕ ಧರಣಿ.‌

Date:

ಹರಿಹರದಲ್ಲಿ ಅವಧಿ ಮುಗಿದಿರುವ ಕ್ರೀಡಾ ಇಲಾಖೆ ಮಳಿಗೆಗಳ ಮರುಹರಾಜಿಗೆ ಕಳೆದೊಂದು ವರ್ಷದಿಂದ ಹೋರಾಟ ನೆಡೆಸುತ್ತಿರುವ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಗಮನ ಸೆಳೆದು ಒತ್ತಡ ಹೇರಲು ದಾವಣಗೆರೆ ನಗರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಮೆ ಬಳಿ ಕುಳಿತು ಬೆಳಿಗ್ಗೆ 11ರಿಂದ ಸಂಜೆವರೆಗೂ ಹೋರಾಟ ನೆಡೆಸಿದರು.

ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಒಟ್ಟು 50 ಮಳಿಗೆಗಳು ಇದ್ದು, ಸದರಿ ಮಳಿಗೆಗಳ ಬಾಡಿಗೆ ಕರಾರು ಅವಧಿಯು 2019 ರಲ್ಲೇ ಪೂರ್ಣಗೊಂಡಿದೆ. ಕೆಲ ಬಾಡಿಗೆದಾರರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನುಳಿದ ಮಳಿಗೆ ಬಾಡಿಗೆದಾರರು ಪರವಾನಿಗೆ ಪಡೆಯದೆ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಾರೆ.‌ ಹಾಗೂ ಅನಧಿಕೃತವಾಗಿ ಇಲ್ಲಿಯವರೆಗೆ ನಗರಸಭೆ ವತಿಯಿಂದ ಪರವಾನಿಗೆ ನವೀಕರಿಸದೇ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಕಾನೂನು ಬಾಹಿರವಾಗಿ ಬಹುತೇಕ ಒಳಬಾಡಿಗೆ ಕೊಟ್ಟು ಬೇರೆ ಮಳಿಗೆ ಬಾಡಿಗೆದಾರರು ಉದ್ದಿಮೆಯನ್ನು ನಡೆಸುತ್ತಿರುವುದು ಕಾನೂನು ಬಾಹಿರ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳಿಗೂ, ಸರ್ಕಾರಕ್ಕೂ ಹಲವಾರು ಬಾರಿ ಮನವಿ ಸಲ್ಲಿಸದರೂ ನಿರ್ಲಕ್ಷ್ಯ ತೋರಿದ್ದಾರೆ.‌ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಫಲವಾಗಿದ್ದು , ಇದರಿಂದ ಆರ್ಥಿಕವಾಗಿ ಹಿಂದುಳಿದ ಬಡ ಸಾರ್ವಜನಿಕರು ಉದ್ಯೋಗ ವಂಚಿತರಾಗಿದ್ದಾರೆ‌. ಈ ಕೂಡಲೇ ಮರು ಹರಾಜು ಪ್ರಕ್ರಿಯೆ ಕೈಗೊಳ್ಳಬೇಕೆಂದು ಕಳೆದ 141 ದಿನಗಳಿಂದ ನಿರಂತರವಾಗಿ ಹರಿಹರ ನಗರದಲ್ಲಿ ಧರಣಿ ನಡೆಸುತ್ತಿದ್ದು, ಇದುವರೆಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಯಾವುದೇ ಮಳಿಗೆಗಳ ಹರಾಜು ಪ್ರಕ್ರಿಯೆ ಕೈಗೊಳ್ಳದೇ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಮುಖಂಡ ಗೋವಿಂದ ಮಾತನಾಡಿ, “ಹರಿಹರ ತಾಲೂಕು ಕ್ರೀಡಾಂಗಣದ 50 ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದು ಐದು ವರ್ಷವಾದರೂ ಇಲ್ಲಿವರೆಗೂ ಮರುಹರಾಜು ನಡೆಸಿಲ್ಲ. ಕಳೆದ 141 ದಿನಗಳವರೆಗೂ ನಮ್ಮ ಜಯಕರ್ನಾಟಕ ಸಂಘಟನೆ ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಅಹಿಂಸಾತ್ಮಕ ಧರಣಿ ಸತ್ಯಾಗ್ರಹ ಹಾಗೂ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ ವಾಣಿಜ್ಯ ಮಳಿಗೆಗಳನ್ನು ಮರು ಹರಾಜು ನಡೆಸುವಲ್ಲಿ ಜಿಲ್ಲಾ ಆಡಳಿತ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ವಿಪುಲವಾಗಿವೆ. ಈ ಮಳಿಗೆಗಳ ಮರು ಹರಾಜಿನಿಂದ ಬಡ ಹಿಂದುಳಿದ ವರ್ಗಗಳ ಜನರಿಗೆ, ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ. ಇದುವರೆಗೂ ನ್ಯಾಯ ದೊರಕದ ಕಾರಣ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಬಳಿ ಹರಿಹರ, ದಾವಣಗೆರೆ ಆಡಳಿತದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು ಈ ಕೂಡಲೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ ಸಂಚಾರ ಮತ್ತು ಹೆಲ್ಮೆಟ್ ಜಾಗೃತಿ ಅಭಿಯಾನ.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಎಸ್ ಗೋವಿಂದ್, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸಿಎಚ್, ಸಂಘಟನಾ ಕಾರ್ಯದರ್ಶಿ ಮಧು ಎಮ್, ಮುಖಂಡರಾದ ಸಾಗರ್, ವಿಜಯ್, ಸಂಜೀವಪ್ಪ ಪಾಲ್ಗೊಂಡಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...