ಚುನಾವಣಾ ಆಯೋಗದಿಂದ ರಾಷ್ಟ್ರಾದ್ಯಂತ (ಎಸ್ಐಆರ್) ವಿಶೇಷ ಮರು ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಪ್ರಗತಿ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ ಲಭಿಸಿದೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷಕುಮಾರ್ SIR ನಲ್ಲಿ ಶೇ.88 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿರುವ ಕುರಿತು ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
16 ನೇ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿ ದಾವಣಗೆರೆ ಉಪ ವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೃಷಿಗಾಗಿ ಮಣ್ಣು ಸಾಗಿಸಲು ಅನುಮತಿ ನೀಡುವಂತೆ ರೈತ ಸಂಘ ಪ್ರತಿಭಟನೆ





