ದಾವಣಗೆರೆ | ಪಹಲ್‌ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಗೆ ಎಸ್‌ಯುಸಿಐ(ಸಿ) ಖಂಡನೆ

Date:

“ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭೀಕರ ಕುಕೃತ್ಯದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು” ಎಂದು ದಾವಣಗೆರೆಯಲ್ಲಿ ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಶ್ರೀಮತಿ ಕೆ.ಉಮಾ ಆಕ್ರೋಶ ವ್ಯಕ್ತಪಡಿಸಿದರು.‌

1001880743
ಜಮ್ಮು ಕಾಶ್ಮೀರ ಪೊಲೀಸ್, ಸೇನೆ ಬಿಡುಗಡೆ ಮಾಡಿರುವ ಭಯೋತ್ಪಾದರ ರೇಖಾ ಚಿತ್ರ

“ಜಮ್ಮು ಮತ್ತು ಕಾಶ್ಮೀರದಲ್ಲಿನ ಆರೋಪಿತ ‘ಜನಸಂಖ್ಯಾ ಬದಲಾವಣೆ’ಗೆ ಪ್ರತೀಕಾರವಾಗಿ ಕಾಶ್ಮೀರದ ಪಹಲ್ಗಾಮ್ ಬಳಿ ನಿಷೇಧಿತ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಸಹ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕರ್ನಾಟಕದ ಇಬ್ಬರು ಸೇರಿದಂತೆ, 28 ಪ್ರವಾಸಿಗರನ್ನು ಹತ್ಯೆ ಮಾಡಿ, ಹತ್ತಾರು ಜನರನ್ನು ಗಾಯಗೊಳಿಸಿರುವುದಕ್ಕೆ ದೇಶದ ಸಮಸ್ತ ಜನರೊಂದಿಗೆ, ನಾವು ಕೂಡ ತೀವ್ರ ಆಘಾತವಾಗಿದೆ. ಇದು ಹೀನ ಕೃತ್ಯ” ಎಂದು ಘಟನೆಯನ್ನು ಖಂಡಿಸಿದರು.

1001880747
ಸಾಂದರ್ಭಿಕ ಚಿತ್ರ, ಕೃಪೆ.

“ಕೇಂದ್ರ ಸರ್ಕಾರ ಭಾರೀ ಪ್ರಮಾಣದ ಮಿಲಿಟರಿ ಸನ್ನದ್ಧತೆ ಮತ್ತು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿಕೊಂಡರೂ, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕ ಜನಸಾಮಾನ್ಯರ ರಕ್ಷಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಇದು ಸಾಬೀತುಪಡಿಸುತ್ತದೆ.
ಎಲ್ಲಾ ಮೃತರ ಕುಟುಂಬಗಳು ಮತ್ತು ಗಾಯಗೊಂಡವರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಸಂತ್ರಸ್ತ ಕುಟುಂಬಗಳ ಸರಿಯಾದ ಪುನರ್ವಸತಿಯನ್ನು ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಗಣತಿ ವರದಿ ವಿರೋಧ ಹಾಸ್ಯಾಸ್ಪದ, ವಿರೋಧಿಗಳಿಗೆ ಅಹಿಂದ ವರ್ಗಗಳ ತಕ್ಕ ಉತ್ತರ; ಜಿಬಿ ವಿನಯ್ ಕುಮಾರ್.

“ಈ ಭೀಕರ ಕುಕೃತ್ಯ ಎಸಗಿದ, ಯೋಜಿಸಿದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಎಲ್ಲಾ ವರ್ಗದ ಜನರು ಈ ಭಯಾನಕ ಹತ್ಯೆಯ ವಿರುದ್ಧ ತಮ್ಮ ಬಲವಾದ ಪ್ರತಿಭಟನೆಯ ಧ್ವನಿಯನ್ನು ಎತ್ತಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...