ದಾವಣಗೆರೆ | ಸಂಘಟನೆ ಹೆಸರು ದುರ್ಬಳಕೆ ಆರೋಪ; ದಸಂಸ ದೂರು

Date:

ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಪಿ.ಜೆ. ಮಹಾಂತೇಶ್ ದೂರು ಸಲ್ಲಿಸಿದ್ದಾರೆ. “1974ರಲ್ಲಿ ಪ್ರೊ. ಬಿ.ಕೃಷ್ಣಪ್ಪನವರು ನಮ್ಮ ಸಂಘಟನೆಯನ್ನು ಭದ್ರಾವತಿಯಲ್ಲಿ ಸ್ಥಾಪಿಸಿದರು. ದಿನಾಂಕ 25/01/1975ರಂದು ಶಿವಮೊಗ್ಗ ಜಿಲ್ಲಾ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಕಾಯ್ದೆಯಡಿ ಸಹಕಾರಿ ಸಂಘಗಳ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಹೆಸರಿನಲ್ಲಿ ನೊಂದಣಿ (ಸಂಖ್ಯೆ: ಎಸ್‌ಎಂಜಿ. ಎಸ್47/74-75) ಮಾಡಿಸಿ, ರಾಜ್ಯಾದ್ಯಂತ ವಿಸ್ತರಿಸಿದೆ” ಎಂದು ಹೇಳಿದ್ದಾರೆ.

ಹೀಗಿದ್ದಾಗ, ಕೆಲವರು ನಮ್ಮ ಸಮಿತಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳತೊಡಗಿದ್ದರಿಂದ ನಮ್ಮ ಮೂಲ ಸಂಘಟನೆ ಹೆಸರಿನೊಂದಿಗೆ ‘ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ’ ಎಂಬುದನ್ನು ನಿಯಮಾನುಸಾರ ಸೇರ್ಪಡೆ ಮಾಡಿಕೊಂಡಿದ್ದಲ್ಲದೆ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಕೆಲವರ ವಿರುದ್ಧ ನಮ್ಮ ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿಯವರು ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಸಂಖ್ಯೆ: 21/2012ನ್ನು ದಾಖಲು ಮಾಡಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಧೀರ್ಘ ವಿಚಾರಣೆ ನಂತರ ನ್ಯಾಯಾಲಯ 24/03/2021ರಂದು ನಮ್ಮ ಸಮಿತಿಯೇ ಮೂಲ ಸಮಿತಿಯಾಗಿದೆ ಎಂದು ತೀರ್ಪು ನೀಡಿದ್ದು, ಪ್ರತಿವಾದಿಗಳು ಪ್ರೊ.ಕೃಷ್ಣಪ್ಪ ಸ್ಥಾಪಿತ ಹೆಸರು ಬಳಕೆ ಮಾಡದಂತೆ, ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ಸಂಘಟನೆಯ ಮತ್ತು ಸದರಿ ಪದಾಧಿಕಾರಿಗಳೆಂದು ಹೇಳಿಕೊಳ್ಳದಂತೆ ಶಾಶ್ವತ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಿದೆ. ಸದರಿ ಆದೇಶದ ವಿರುದ್ಧ ಪ್ರತಿವಾದಿಗಳು ಹಿರಿಯ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಅದು ಇದುವರೆಗೂ ಇತ್ಯರ್ಥವಾಗಿಲ್ಲ.

ಹೀಗಿದ್ದಾಗ ಕೆಲವರು ‘ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ), ಮಹಾತ್ಮಾ ಪ್ರೊ.ಕೃಷ್ಣಪ್ಪ  ರಿ.ನಂ.386/2020-21’ ಎಂದು ಕಾನೂನು ಬಾಹಿರವಾಗಿ ಲೆಟರ್ ಹೆಡ್ ಮಾಡಿಸಿಕೊಂಡು ಜನರನ್ನು, ಅಧಿಕಾರಿಗಳನ್ನು, ಜನಪ್ರತಿನಿಧಿಗಳನ್ನು ವಂಚಿಸುತ್ತಿದ್ದಾರೆ. ಒಂದು ವೇಳೆ ಇವರು ನೊಂದಣಾಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಅದೇ ಹೆಸರಿನಲ್ಲಿ ತಮ್ಮ ಸಮಿತಿಯನ್ನು ನೊಂದಣಿ ಮಾಡಿಕೊಂಡಿದ್ದರೂ ಸಹ ಲೆಟರ್ ಹೆಡ್‌ನಲ್ಲಿ ನೊಂದಣಿ ಸಂಖ್ಯೆಯೊಂದಿಗೆ ‘ಮಹಾತ್ಮ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ’ ಎಂದು ಬರೆದುಕೊಂಡಿರುವುದು ಅಕ್ಷಮ್ಯ ಅಪರಾಧ.

ಸ್ವತಃ ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿ, ನೊಂದಾಯಿಸಿರುವ ನಮ್ಮ ಸಮಿತಿ ಇರುವಾಗಲೂ, ಮುಖ್ಯವಾಗಿ ದಿನಾಂಕ 30.04.1997ರಂದೆ ಪ್ರೊ.ಬಿ.ಕೃಷ್ಣಪ್ಪನವರು ನಿಧನರಾಗಿದ್ದಾಗ್ಯೂ, 2020-21ರಲ್ಲಿ ನೊಂದಾಯಿಸಿರುವ ಸಮಿತಿಗೆ ‘ಮಹಾತ್ಮ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ’ ಎಂದು ಬರೆದುಕೊಂಡು ಜನರ ಕಣ್ಣಿಗೆ ಮಣ್ಣೆರಚುತ್ತಿರುವ, ವಂಚಿಸುತ್ತಿರುವವರು ಸೇರಿದಂತೆ ಈ ವಂಚನೆಯಲ್ಲಿ ಭಾಗೀದಾರರಾಗಿರುವ ಎಲ್ಲರ ವಿರುದ್ಧ ದೂರು ದಾಖಲಿಸಿಕೊಂಡು, ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.

ಈ ವೇಳೆ ಭಾಗ್ಯಮ್ಮ, ಹನುಮಕ್ಕ, ಪುಷ್ಪ, ನಾಗಮ್ಮ, ಶಕುಂತಲ, ನಿರ್ಮಲ, ತಿಮ್ಮಣ್ಣ, ಮಾತಂಗ, ಶೈಲೂ, ಆಲಮ್ಮ, ಮೈಲಮ್ಮ, ಮಲ್ಲಮ್ಮ, ಗಂಗಮ್ಮ, ಹನುಮಂತ, ವೆಂಕಟೇಶ್, ರಂಗನಾಥ ಹಾಗೂ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...