ದಾವಣಗೆರೆ | ಪ್ರತ್ಯೇಕ ಲಿಂಗಾಯತ ಧರ್ಮ ಬೆಂಬಲಿಸಿ, ಅವರ ಮೇಲೆಯೇ ಈ ಸರ್ಕಾರ ಲಾಠಿ ಪ್ರಹಾರ ನೆಡೆಸಿದೆ;ರಂಭಾಪುರಿ ಶ್ರೀ

Date:

“”ಸರ್ಕಾರದ ಕಳೆದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ನಡೆಯಿತು.‌ ಈ ಅವಧಿಯಲ್ಲಿ ಅದಕ್ಕೆ ಬೆಂಬಲಿಸಿದವರ ಮೇಲೆಯೇ ಅದೇ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದು ನಮಗೆ ಬೇಸರವಾಗಿದೆ”
ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಪಂಚಪೀಠಗಳ ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀ ಪರೋಕ್ಷವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.‌

ಹರಿಹರದಲ್ಲಿ ನೆಡೆದ ರಂಭಾಪುರಿ ಪೀಠದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆಯ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು “ಈ ಸರ್ಕಾರ ಜಾತಿ ಗಣತಿ ಮಾಡಿ ವೀರಶೈವ ಲಿಂಗಾಯತರು ಕೇವಲ 60 ಲಕ್ಷ ಎಂದು ಹೇಳಲಾಗಿದೆ. ಅಂಕಿ ಅಂಶಗಳನ್ನು, ಜಾತಿ ಗಣತಿ ಸರಿಯಾಗಿ ನಿರ್ವಹಿಸಿಲ್ಲ. ಈಗ ಕೇಂದ್ರ ಸರ್ಕಾರ ಜಾತಿ ಗಣತಿ‌ ಮಾಡುತ್ತಿದೆ. ವೀರಶೈವ ಲಿಂಗಾಯತರು ಒಳ ಪಂಗಡ ಮರೆತು ಒಂದಾಗಬೇಕು” ಎಂದು ಕರೆ ನೀಡಿದರು.

1002354809

“ಇತ್ತೀಚಿಗೆ ವೀರಶೈವ ಲಿಂಗಾಯತರಿಗೆ ರಾಜಕೀಯ ಪ್ರಾತಿನಿಧ್ಯ ಜನಸಂಖ್ಯೆಗೆ ಅನುಗುಣವಾಗಿ ನಿರೀಕ್ಷಿತ ಪ್ರಮಾಣದಲ್ಲಿ ಸಿಗುತ್ತಿಲ್ಲ. ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಿಪಡಿಸುವ ಕೆಲಸವಾಗಬೇಕಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನಗರಸಭೆಯಿಂದ ನೈರ್ಮಲ್ಯ ಕಾಪಾಡಲು ಹೋಟೆಲ್ ಗಳಲ್ಲಿ ಆಹಾರ ತಯಾರಿಕೆ ಪರಿಶೀಲನೆ, ಎಚ್ಚರಿಕೆ

“ಹತ್ತಾರು ಕಾರಣಕ್ಕೆ ವೀರಶೈವ ಪಂಚಪೀಠಗಳು ಪ್ರತ್ಯೇಕ ಆಗಿದ್ದವು. ಇತ್ತೀಚೆಗೆ ಸಮಾಜದ ಹಿತದೃಷ್ಟಿಯಿಂದ ಮಾತುಕತೆ ನಡೆಸಿ ದಾವಣಗೆರೆಯಲ್ಲಿ ಜುಲೈ 21&22 2025 ರಂದು ದಾವಣಗೆರೆ ರೇಣುಕ ಮಂದಿರದಲ್ಲಿ ನಡೆಯುವ ಪೀಠಾಚಾರ್ಯರ ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನ ನಡೆಯಲಿದೆ. ಪಂಚಪೀಠಗಳು ಹಾಗೂ ಶಿವಾಚಾರ್ಯರು ಒಂದೇ ವೇದಿಕೆ ನಂತರ ವಿರಕ್ತರು ಸಹ ನಮ್ಮೊಂದಿಗೆ ಬರಬೇಕಿದೆ. ಹಾಗಾಗಿ ಮೊದಲು ನಾವು ಒಂದಾಗಿ ನಂತರ ವಿರಕ್ತರು ಅಂದ್ರೆ ಬಸವಾಭಿಮಾನಿಗಳನ್ನು ಒಂದೇ ವೇದಿಕೆಗೆ ತರುವ ಸಂಕಲ್ಪವಿದೆ” ಎಂದು ಬಾಳೆಹೊನ್ನೂರು ಪೀಠದ ಶ್ರೀಗಳು ಆಶಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...