ದಾವಣಗೆರೆ | ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು.

Date:

ಬಟ್ಟೆ ತೊಳೆಯಲು ಹೋಗಿದ್ದ ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ದಾವಣಗೆರೆ ಜಿಲ್ಲೆ ಚನ್ನಗಿರಿ ಬಳಿ ಸಂಭವಿಸಿದೆ.

ದೀಪಾರಾಣಿ(30), ದಿವ್ಯಾ(26) ಮತ್ತು ಚಂದನಾ(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.‌ ಚನ್ನಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ಲಕ್ಷ್ಮಿಸಾಗರ-ದಿಗ್ಗೇನಹಳ್ಳಿ ಗ್ರಾಮದ ಮಧ್ಯೆ ಇರುವ ಹೊಸಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಮೃತಪಟ್ಟಿರುವ ದಿವ್ಯಾ ಮತ್ತು ಚಂದನಾ ಸಹೋದರಿಯರಾಗಿದ್ದು, ದೀಪಾರಾಣಿ ಪಕ್ಕದ ಮನೆಯವರು.

ಮಧ್ಯಾಹ್ನದ ವೇಳೆಯಲ್ಲಿ ದೀಪಾರಾಣಿ, ದಿವ್ಯಾ ಮತ್ತು ಚಂದನಾ ಬಟ್ಟೆ ತೊಳೆಯಲೆಂದು ಕೆರೆಗೆ ತೆರಳಿದ್ದಾರೆ. ಆಕಸ್ಮಿಕವಾಗಿ ಕೆರೆಗೆ ಇಳಿದಿರುವ ಚಂದನಾ ಕೆಸರಿನಲ್ಲಿ ಸಿಲುಕಿದ್ದಾಳೆ ಎನ್ನಲಾಗಿದ್ದು, ಚಂದನಾಳನ್ನು ಕಾಪಾಡಲು ನೀರಿಗೆ ಇಳಿದ ಅಕ್ಕ ದಿವ್ಯಾ ಪ್ರಯತ್ನಿಸಿ, ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಇವರಿಬ್ಬರನ್ನು ರಕ್ಷಿಸಲು ಮುಂದಾದ ದೀಪಾರಾಣಿ ಸಹ ಕೆರೆಯಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂವಿಧಾನದ ಅಡಿಯಲ್ಲಿ ಸಮುದಾಯಗಳ ಸಂಘಟನೆಗಾಗಿ ಅಹಿಂದ ಚಳವಳಿ ಸಂಘಟನೆ

ದೀಪಾರಾಣಿ ಮತ್ತು ದಿವ್ಯಾ ಅವರಿಗೆ ವಿವಾಹವಾಗಿದ್ದು, ದೀಪಾರಾಣಿಗೆ ಮೂವರು ಮಕ್ಕಳಿದ್ದಾರೆ. ದಿವ್ಯಾಗೆ ಒಂದು ವರ್ಷದ ಮಗುವಿದೆ. ಮೃತರ ಕುಟುಂಬದವರ ಮತ್ತು ತಾಯಿಯರನ್ನು ಕಳೆದುಕೊಂಡ ಮಕ್ಕಳ ರೋಧನ ಮನಕಲಕುವಂತಿದೆ.

ಚನ್ನಗಿರಿ ಅಗ್ನಿಶಾಮಕ ದಳದ ಕುಮಾರ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ಮೂವರ ಶವಗಳನ್ನು ಮೇಲೆಕ್ಕೆತ್ತಿ, ಶವಗಳನ್ನು ಚನ್ನಗಿರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಕಳುಹಿಸಿಕೊಡಲಾಗಿದೆ. ತಹಶೀಲ್ದಾರ್ ಎನ್‌.ಜೆ. ನಾಗರಾಜ್, ವೃತ್ತ ನಿರೀಕ್ಷಕ ಕೆ. ರವೀಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...