ದಾವಣಗೆರೆ | ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ

Date:

ದಾವಣಗೆರೆ ವಿಶ್ವವಿದ್ಯಾಲಯದ 45 ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದರು.‌ ಈ ಬಾರಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಯನ ಎನ್.ಬಿ ಒಟ್ಟು ಏಳು ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದು, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಪದಕ ಸ್ವೀಕರಿಸಿದರು.

ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ, ರ‍್ಯಾಂಕ್ ವಿಜೇತರು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರಧಾನ ಮಾಡಿದರು.
ಎರಡು ಮತ್ತು ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಂಜೆ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ನಡೆಯಿತು.‌ ಈ ಬಾರಿಯೂ ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇದಲ್ಲದೆ 30 ಮಹಿಳೆಯರು ಪಿಎಚ್.ಡಿ. ಪದವಿ ಪಡೆದಿರುವುದು ವಿಶೇಷ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದಾವಣಗೆರೆ ವಿವಿಯಲ್ಲಿ ಮಹಿಳೆಯರೇ ಉನ್ನತಿ ಸಾಧಿಸುತ್ತಿರುವುದು ಗಮನಾರ್ಹವಾಗಿದೆ.

ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 12706 ವಿದ್ಯಾರ್ಥಿಗಳಿಗೆ ಹದಿಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ನಾತಕೋತ್ತರ ಪದವಿಯ ಎಂಬಿಎ ವಿಭಾಗದ ದೀಪಾ ಆರ್ ತಲಾ ನಾಲ್ಕು ಸ್ವರ್ಣ ಪದಕಗಳನ್ನು ಪಡೆದರು. ಗಣಿತಶಾಸ್ತ ವಿಭಾಗದ ಕವನ ಪಿ.ಎಂ, ಜೀವರಸಾಯನಶಾಸ್ತ್ರ ವಿಭಾಗದ ರುಚಿತಾ ಡಿ, ಭೌತವಿಜ್ಞಾನ ವಿಭಾಗ ಪುಟ್ಟರಾಜ ಎಂ.ಆರ್, ಪ್ರಾಣಿಶಾಸ್ತ್ರ ವಿಭಾಗದ ಪುಷ್ಪಾ ಜೆ, ಇಂಗ್ಲಿಷ್ ವಿಭಾಗದ ವಿಜಯಲಕ್ಷ್ಮಿ ಬಿ.ಎಂ, ಮತ್ತು ಕನ್ನಡ ವಿಭಾಗದ ಅನುಷಾ ಎಂ.ಎ. ಅವರು ತಲಾ ಮೂರು ಚಿನ್ನಗಳೊಂದಿಗೆ ಹೆಚ್ಚು ಚಿನ್ನದ ಪದಕ ಗಳಿಸಿದವರ ಪಟ್ಟಿಗೆ ಸೇರಿದ್ದಾರೆ.

1003589893
ಏಳು ಚಿನ್ನದ ಪದಕ ಗಳಿಸಿದ ನಯನ ಎನ್ ಬಿ

ಇವರಲ್ಲದೆ ಅರ್ಥಶಾಸ್ತ್ರ ವಿಭಾಗದಲ್ಲಿ ಎಸ್‌ಬಿಸಿ ಪ್ರಥಮ ದರ್ಜೆ ಕಾಲೇಜಿನ ಕೋನೇನ್ ತಬಸುಮ್, ಪತ್ರಿಕೋದ್ಯಮ ವಿಭಾಗದ ಚಂದನ ವಿ.ಎಂ, ಇತಿಹಾಸ ಮತ್ತು ಪ್ರಾಚ್ಯ ಶಾಸ್ತ್ರ ವಿಭಾಗದಲ್ಲಿ ಪ್ರದೀಪಕುಮಾರ ಬಿ, ಸಸ್ಯಶಾಸ್ತ್ರ ವಿಭಾಗದ ಪ್ರಿಯಾ ಎಂ, ಎಂಪಿಇಡಿಯಲ್ಲಿ ಗಗನ ಎ.ಎಂ, ರಸಾಯನಶಾಸ್ತ್ರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚೌಡೇಶ್ವರಿ ಟಿ, ಗಣಕ ವಿಜ್ಞಾನ ವಿಭಾಗದ ಸುಮತಿ ಎಚ್.ಪಿ, ಆಹಾರ ತಂತ್ರಜ್ಞಾನ ವಿಭಾಗದ ನಿತೀಶ್ ಕೆ.ಗೌಡ, ಸೂಕ್ಷ್ಮಜೀವಿ ಶಾಸ್ತ್ರ ವಿಭಾಗದ ಗಾಯತ್ರಿ ದೀಪಿಕಾ ಬಿ ಅವರು ತಲಾ ಎರಡು ಬಂಗಾರದ ಪದಕಗಳನ್ನು ಗಳಿಸಿದ್ದಾರೆ.

“ಅರ್ಥಶಾಸ್ತ್ರ ವಿಭಾಗದಲ್ಲಿ ಶಿವಗಂಗೋತ್ರಿ ಆವರಣದ ಕಾವ್ಯಾ ಆರ್, ಕನ್ನಡ ವಿಭಾಗದಲ್ಲಿ ಚಿತ್ರದುರ್ಗ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ಬೋರಯ್ಯ ಸಿ.ಸಿ, ರಾಜ್ಯಶಾಸ್ತ್ರ ವಿಭಾಗದ ಸಿಂಧು ಎಚ್ ಮತ್ತು ಅಮೂಲ್ಯ ಜಿ.ಎಂ., ಸಮಾಜಶಾಸ್ತ್ರ ವಿಭಾಗದಲ್ಲಿ ಶುಭಾ ಪಿ.ಒ, ಉರ್ದು ವಿಭಾಗದಲ್ಲಿ ಶುಬ್ನಮ್ ಬಳಿಗಾರ, ಎಂಎಸ್‌ಡಬ್ಲ್ಯು ವಿಭಾಗದಲ್ಲಿ ಚಿಕ್ಕಮ್ಮ ಎಂ., ಎಂ.ಕಾಂನಲ್ಲಿ ತೇಜರಾಜ ಎಸ್.ಎ, ಎಂಬಿಎ ವಿಭಾಗದಲ್ಲಿ ಪಾವನಿ ಎಸ್, ಪಲ್ಲವಿ ಕೆ.ಎಸ್, ಎಂಇಡಿಯಲ್ಲಿ ಸಮ್ರಿನ್ ಎಂ., ಜೀವರಸಾಯನಶಾಸ್ತ್ರ ವಿಭಾಗದ ಜೈವಿಕ ತಂತ್ರಜ್ಞಾನ ವಿಭಾಗದ ಧನರಾಜ್ ಆರ್.ಕೆ, ಅಪರಾಧಶಾಸ್ತ್ರ ವಿಭಾಗದ ಐಶ್ವರ್ಯ ಒ.ಎಸ್, ಮತ್ತು ಯೋಗ ವಿಜ್ಞಾನ ವಿಭಾಗದಲ್ಲಿ ಬಾಳಾಸಾಹೇಬ ಸುರಪುರ ಅವರು ತಲಾ ಒಂದೊಂದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ನಾತಕ ಕಲಾ ಪದವಿ(ಬಿಎ)ಯಲ್ಲಿ ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕ ಡಿ.ಆರ್., ವಾಣಿಜ್ಯ (ಬಿ.ಕಾಂ) ಪದವಿಯಲ್ಲಿ ದಾವಣಗೆರೆ ಎಜಿಬಿ ಪ್ರಥಮ ದರ್ಜೆ ಕಾಲೇಜಿನ ಕೀರ್ತನಾ ಎಸ್ ಮತ್ತು ಶಿಕ್ಷಣ (ಬಿಇಡಿ) ಪದವಿಯಲ್ಲಿ ದಾವಣಗೆರೆಯ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಕಾಲೇಜಿನ ಹಜ್ಮಾ ಜೆ. ಅವರು ತಲಾ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

“ದೃಶ್ಯಕಲಾ ಮಹಾವಿದ್ಯಾಲಯದ ಐಶ್ವರ್ಯ ಎಲಿಗಾರ, ಬಿಸಿಎ ಪದವಿಯಲ್ಲಿ ಇಂಟರ್‌ಫೇಸ್ ಕಂಪ್ಯೂಟರ್ ಅಪ್ಲಿಕೇಶನ್ ಕಾಲೇಜಿನ ಪಿ.ವೆಂಕಟದುರ್ಗಾ ಪ್ರಸಾದ,  ಬಿಎಸ್‌ಸಿಯಲ್ಲಿ ಎ.ವಿ.ಕಮಲಮ್ಮ ಕಾಲೇಜಿನ ಹಬೀಬಾ ಮಿಸ್ಬಾ ಅವರು ತಲಾ ಎರಡು ಚಿನ್ನ ಗಳಿಸಿದ್ದಾರೆ. ಬಿಪಿಇಡಿಯಲ್ಲಿ ಮಲ್ಲಾಡಿಹಳ್ಳಿಯ ಶತಮಾನೋತ್ಸವ ದೈಹಿಕ ಶಿಕ್ಷಣ ಕಾಲೇಜಿನ ನಾಗವೇಣಿ ಬಿ., ಬಿಬಿಎನಲ್ಲಿ ಆರ್‌ಜಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ದಿಶಾ ಜೈನ್, ಗಣಿತಶಾಸ್ತ್ರದಲ್ಲಿ ಅತಿಹೆಚ್ಚು ಅಂಕ ಗಳಿಸಿದ ಡಿಆರ್‌ಎಂ ಕಾಲೇಜಿನ ಸುಶ್ಮಿತಾ ರಾವ್ ಹಾಗೂ ದೃಶ್ಯ ಕಲಾ ಕಾಲೇಜಿನ ನವ್ಯ ಎ.ಆರ್. ತಲಾ ಒಂದು ಚಿನ್ನದ ಪದಕವನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಜಾಪ್ರಭುತ್ವ ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಬಿಡಿ ಕುಂಬಾರ , ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಕುಲಸಚಿವ ಎಸ್.ಬಿ.ಗಂಟಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ವಂದನಾ, ವಿವಿಧ ನಿಕಾಯಗಳ ಡೀನರಾದ ಪ್ರೊ.ಕೆ.ವೆಂಕಟೇಶ, ಪ್ರೊ.ಎಂ.ಯು.ಲೋಕೇಶ, ಪ್ರೊ.ಗೋವಿಂದಪ್ಪ, ಪ್ರೊ.ಶ್ರೀನಿವಾಸ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು. .

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...