ದಾವಣಗೆರೆ | ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯಂತಹ ಸಮಸ್ಯೆಗೆ ವಚನ ಸಾಹಿತ್ಯ ಪರಿಹಾರ

Date:

“ದೇಶದಲ್ಲಿ ಮೂರು ಮುಖ್ಯ ಪಿಡುಗುಗಳಿದ್ದು,  ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯ ಮೂರು ಪಿಡುಗುಗಳಿಂದಾಗಿ ಸಮಸ್ಯೆಗಳುಂಟಾಗಿ ದೇಶದ ಅಭಿವೃದ್ಧಿ ಕುಂಠಿತ ಆಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ವಚನ ಸಾಹಿತ್ಯವೇ ಪರಿಹಾರ” ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಬಿ. ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

1002228608

ದಾವಣಗೆರೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಆವರಗೆರೆ ಗ್ರಾಮದ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ‘ವಚನ ಸಂರಕ್ಷಣೆ ದಿನ ಹಾಗೂ ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದತ್ತಿ ದಾನಿಗಳಾದ ವಿಭೂತಿ ಬಸವಾನಂದ ಶರಣರು ಮಾತನಾಡಿ, “ಭಾರತ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇಂದು ಬಹುತ್ವದ ಭಾರತವಾಗಿ ಉಳಿಯಬೇಕಾದರೆ ವಚನ ಸಾಹಿತ್ಯ ಪ್ರಚಾರ ಆಗಬೇಕು. ಬಹುತ್ವದ ಭಾರತವನ್ನು ಉಳಿಸಲು ವಚನ ಸಾಹಿತ್ಯ ಮುಖ್ಯ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002228606 1

ದಾವಣಗೆರೆ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾದ ಆವರಗೆರೆ ರುದ್ರಮುನಿ ಮಾತನಾಡಿ, “ಸುಸಂಸ್ಕೃತ ಸಮಾಜ ನಿರ್ಮಾಣ ಮಕ್ಕಳಿಂದಲೇ ಸಾಧ್ಯ. ಹಾಗಾಗಿ ಮಕ್ಕಳಿಗೆ ವಚನ ಸಾಹಿತ್ಯ ಉಣಬಡಿಸುವ ಕಾರ್ಯ ಮಹತ್ವದ್ದು” ಎಂದು ತಿಳಿಸಿದರು.

1002228605 1

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಪರಿಷತ್ತಿನ ಕಾರ್ಯದರ್ಶಿ ಕರೂರು ಹನುಮಂತಪ್ಪ ವಚನ ಸಾಹಿತ್ಯದ ಕುರಿತು ಹಾಗೂ ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದರು. ಅನುಭಾವ ನೀಡಿದ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಇವರು ವಚನ ಸಾಹಿತ್ಯದ ನಾಶ ಮಾಡುವ ಕೆಲಸ ಹೇಗಾಯಿತು, ಅದರ ಸಂರಕ್ಷಣೆಗಾಗಿ ಶರಣರು ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಬಗೆ ಹಾಗೂ ಫ. ಗು. ಹಳಕಟ್ಟಿ ಅವರ ಕುರಿತು ಅನುಭಾವವನ್ನು ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಜಲಾಶಯ ಸಮೀಪ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬಂದ್

ಕಾರ್ಯಕ್ರಮದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಖಜಾಂಚಿಗಳಾದ ಮುದೇಗೌಡ್ರ ನಾಗರಾಜ ಕಕ್ಕರಗೊಳ್ಳ, ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಬಿ. ಪ್ರಕಾಶ,  ಶಿಕ್ಷಕ ಲೋಕೇಶ, ವಿರೂಪಾಕ್ಷಪ್ಪ, ಜಗದೀಶ, ದಾವಣಗೆರೆ ತಾಲೂಕು ಮಹಿಳಾ ಬಂಧುತ್ವ ವೇದಿಕೆಯ ಸುಮಲತಾ ಸೇರಿದಂತೆ ಶಾಲಾ ಸಿಬ್ಬಂದಿವರ್ಗ, ಗ್ರಾಮಸ್ಥರು, ಶಾಲಾ ಮಕ್ಕಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...