ಮನೆಯ ನೀರಿನ ಬಾಯ್ಲರ್ ಸ್ಫೋಟಗೊಂಡು ಹನ್ನೂಂದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ನಗರದ ದುರ್ಗೀಗುಡಿ ಸಮೀಪದ ಮನೆಯಲ್ಲಿ ನಡೆದಿದೆ. ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ವೀಕೃತಿ ಮೃತಪಟ್ಟ ಬಾಲಕಿಯಾಗಿದ್ಧು, ಮಂಗಳವಾರ ಬೆಳಗ್ಗೆ ಬಾಯ್ಲರ್ ಸ್ಫೋಟಗೊಂಡಿದ್ದು, ಸಮೀಪದಲ್ಲೇ ಇದ್ದ ಸ್ವೀಕೃತಿ ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಬುಧವಾರ ಕೊನೆಯುಸಿರೆಳೆದಿದ್ದಾಳೆ.
ತೀರ್ಥಿಬಾಯಿ (72) ವಯೋವೃದ್ಧೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ತಂದೆ ಹೂವನಾಯ್ಕ್ ಮತ್ತು ತಾಯಿ ಸುನಿತಾ ಬಾಯಿಗೂ ಗಾಯಗಳಾಗಿದ್ದು, ಅವರಿಗೂ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ
ಬಾಯ್ಲರ್ ಸ್ಫೋಟಗೊಂಡ ವೇಳೆ ಬಾಲಕಿ ಸ್ವೀಕೃತಿಗೆ ಬೆಂಕಿ ಹತ್ತಿಕೊಂಡಿದೆ. ತನ್ನ ಮೊಮ್ಮಗಳಿಗೆ ಹತ್ತಿರುವ ಬೆಂಕಿಯನ್ನು ನಂದಿಸಲು ಹೋದ ಅಜ್ಜಿ ತೀರ್ಥಿಬಾಯಿಗೂ ಗಂಭೀರ ಗಾಯಗಳಾಗಿದೆ. ವಾಲ್ಮೀಕಿ ಜಯಂತಿಯಂದು ಸರ್ಕಾರಿ ರಜೆ ಇದ್ದ ಪರಿಣಾಮ ಎಲ್ಲರೂ ಮನೆಯಲ್ಲೇ ಇದ್ದರು. ಹೂವಾನಾಯ್ಕ್ ತಾಲೂಕಿನ ಬೆನಕನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಘಟನೆ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





