ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿ ಹತ್ಯೆ

Date:

ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ ನ್ಯಾಯ‌ಮಂಡಳಿಗೆ ಆಗಮಿಸಿದ್ದ ವೇಳೆ ಗಂಡನೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ ದಾವಣಗೆರೆಯ ಎಂಸಿಸಿ ಬಡಾವಣೆಯ ಬಾಲ ನ್ಯಾಯಮಂಡಳಿ ಆವರಣದಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಕಾಡಜ್ಜಿ ಗ್ರಾಮದ ಕಲೀಂವುಲ್ಲಾ ಪತ್ನಿ ಮುಷ್ಕಾನ್ ಬಾನು (26) ಕೊಲೆಯಾದವರು. ಪತಿ ಕಲೀಂವುಲ್ಲಾ (35) ಕೊಲೆ ಮಾಡಿದ ಆರೋಪಿಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರವಾಗಿದ್ದರು ಎಂದು ಮೂಲಗಳು ತಿಳಿಸಿವೆ.‌

ಮಂಗಳವಾರ ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾತುಕತೆ ಮೂಲಕ ವಿಚಾರ ಬಗೆಹರಿಸಿಕೊಳ್ಳಲು ಎಂಸಿಸಿ ಬಡಾವಣೆಯ ಬಾಲ ನ್ಯಾಯ ಮಂಡಳಿಗೆ ಬಂದಾಗ ಆವರಣದಲ್ಲಿಯೇ ಚಾಕುವಿನಿಂದ ಹಿರಿದು ಕೊಂದಿದ್ದಾನೆ ಎನ್ನಲಾಗಿದೆ. ಅಲ್ಲದೇ, ಜಗಳ ಬಿಡಿಸಲು ಮುಂದಾದ ಬಾನು ಅವರ ತಾಯಿ ಪರ್ಜಾನ್ (50) ಅವರಿಗೂ ಕೂಡ ಚಾಕು ಇರಿತಕ್ಕೆ ಒಳಗಾಗಿದ್ದಾರೆ, ಗಾಯಗೊಂಡು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್

ಮುಷ್ಕಾನ್ ಬಾನು ಹಾಗೂ ಕಲೀಂವುಲ್ಲಾ ದಂಪತಿ ಕೌಟುಂಬಿಕ ಕಲಹದ ಕಾರಣದಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಇಬ್ಬರು ಮಕ್ಕಳ ಪಾಲನೆಯ ವಿಚಾರದಲ್ಲಿ ಸೃಷ್ಟಿಯಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಬಾಲ ನ್ಯಾಯಮಂಡಳಿಗೆ ಆಗಮಿಸಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಹಿಳೆಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಮುಷ್ಕಾನ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಮೃತಪಟ್ಟರು ಎನ್ನಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...