ಆನ್ಲೈನ್ ಗೇಮಿಂಗ್‌ಗೆ ಯುವಕ ಬಲಿ; ಡೆತ್ ನೋಟಿನಲ್ಲಿ ಸಿಎಂ, ಡಿಸಿಎಂ, ನ್ಯಾಯಾಧೀಶರಿಗೆ ಮನವಿ

Date:

ಯುವಕನೋರ್ವ ಆನ್ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೂ ಮುನ್ನ ಆರು ಪುಟಗಳ ಡೆತ್‌ ನೋಟ್ ಬರೆದಿಟ್ಟಿದ್ದಾನೆ. ಸಿಎಂ, ಡಿಸಿಎಂ ಅಲ್ಲದೇ ಮುಖ್ಯ ನ್ಯಾಯಾಧೀಶರಿಗೂ ಎರಡು ಪುಟಗಳ ಮನವಿ ಪತ್ರ ಬರೆದಿದ್ದಾನೆ. ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಬಗ್ಗೆಯೂ ಡೆತ್‌ ನೋಟ್‌ನಲ್ಲಿ ಬರೆದಿದ್ದು, ಆನ್‌ಲೈನ್ ಗೇಮ್‌ ನಂಥ ವೆಬ್‌ ಸೈಟ್ ವಿರುದ್ಧ ಧ್ವನಿ ಎತ್ತುವಂತೆ ಕೇಳಿಕೊಂಡಿದ್ದಾನೆ. ಘಟನೆ ದಾವಣಗೆರೆ ನಗರದ ಸರಸ್ವತಿನಗರದಲ್ಲಿ ನಡೆದಿದ್ದು, ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಆನ್ಲೈನ್ ಗೇಮಿಂಗ್, ಮಟ್ಕಾ, ಗಾಂಜಾ ಸೇರಿದಂತೆ ಅಕ್ರಮ ಚಟುವಟಿಕೆಗಳ ಹಾವಳಿ ಮಿತಿ ಮೀರುತ್ತಿದ್ದು, ಆತ್ಮಹತ್ಯೆಗೆ ಶರಣಾದ ಯುವಕ ಆನ್ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಆನ್‌ಲೈನ್ ಗೇಮ್‌ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ ಎಂದು ಹೇಳಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಗರದ ಸರಸ್ವತಿನಗರ ನಿವಾಸಿ ಶಶಿಕುಮಾರ್(25) ಎಂದು ಗುರುತಿಸಲಾಗಿದೆ. ಸಾವಿನ ನಂತರ ಯುವಕನೇ ಬರೆದಿದ್ದಾನೆ ಎನ್ನಲಾಗಿರುವ ಡೆತ್ ನೋಟ್ ಒಂದು ಸಿಕ್ಕಿದ್ದು ಅದರಲ್ಲಿ ಕೂಡ ಆನ್ಲೈನ್ ಗೇಮ್ಸ್ ಗೆ ಹಣ ಕಳೆದುಕೊಂಡ ಬಗ್ಗೆ ತಿಳಿಸಿದ್ದಾನೆ ಎಂದು ಕುಟುಂಬದ ಸ್ನೇಹಿತರೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನ್‌ಲೈನ್ ಗೇಮ್‌ನಲ್ಲಿ ಹಣ ಹೂಡಿಕೆ ಮಾಡಿದ್ದ. ನಂತರ ಸಾಲ ಮಾಡಿಕೊಂಡು ಅದರಲ್ಲಿ ಸಿಲುಕಿ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.‌ ಶಶಿಕುಮಾರ್ ಸುಮಾರು 19,25,21,722 ರೂ. ಆನ್‌ಲೈನ್ ಗೇಮ್‌ನಲ್ಲಿ ಬಂದಿದ್ದು, ವೆಬ್‌ಸೈಟ್ ಮಾಲೀಕರಿಗೆ ಕೇಳಿದರೆ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಹಣ ಹೂಡಿಕೆ ಮಾಡಿದ್ದೆ. ಗೇಮ್ ನಲ್ಲಿ ಸೋತಾಗ ಹಣ ಪಡೆದಿದ್ದಾರೆ, ನಾನು ಗೆದ್ದಾಗ ನೀಡಿಲ್ಲ ಎಂದು ಶಶಿಕುಮಾ‌ರ್ ಡೆಟ್‌ನೋಟ್‌ನಲ್ಲಿ ಆರೋಪಿಸಿದ್ದು, ಈ ಸಂಬಂಧ ಈ ಮುಂಚೆ ವಿದ್ಯಾನಗರ ಪೊಲೀಸ್ ಠಾಣೆಗೂ ದೂರು ನೀಡಿದ್ದಾನೆ.

ಆತ್ಮಹತ್ಯೆ ಪರಿಹಾರವಲ್ಲ ಇಮೇಜ್

ಈ ಬಗ್ಗೆ ದಾವಣಗೆರೆಯ ಕೆಟಿಜೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಗೆ ಕ್ರಮ ಕೈಗೊಂಡಿದ್ದಾರೆ. ದಾವಣಗೆರೆಯಲ್ಲಿ ಯುವಕರು ಆನ್ಲೈನ್ ಗೇಮಿಂಗ್ ನಲ್ಲಿ ಹೆಚ್ಚು ತೊಡಗುತ್ತಿದ್ದು, ಇದರಲ್ಲಿ ಹಣ ಕಳೆದುಕೊಂಡವರು ಅಕ್ರಮ ಚಟುವಟಿಕೆಗಳಲ್ಲಿ ಕೂಡ ಕೆಲವೊಮ್ಮೆ ಭಾಗಿ ಆಗುತ್ತಿದ್ದಾರೆ. ಈ ಕುರಿತು ನಿಯಮಗಳನ್ನು ರೂಪಿಸಿ ಪೊಲೀಸ್ ಇಲಾಖೆ, ಸರ್ಕಾರ ಕಡಿವಾಣ ಹಾಕಬೇಕಿದೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಗಿಲ್ ಕಂಪೆನಿ ಹಸ್ತಾಂತರ ನಿಲ್ಲಿಸಿ ಹಕ್ಕುಗಳನ್ನು ರಕ್ಷಿಸಲು ರೈತ ಸಂಘ ಹಾಗೂ ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯ

ಆತ್ಮಹತ್ಯೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...