ದಾವಣಗೆರೆ | ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹ

Date:

ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಟಿ.ಅಸ್ಗರ್, “ಶ್ರೀರಂಗಪಟ್ಟಣದಲ್ಲಿ ಮಾತನಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ’ ಎಂದು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಮಾತನಾಡಿದ್ದಾರೆ. ವಿವಾಹಿತ ಮಹಿಳೆಯರ ಲೈಂಗಿಕ ಜೀವನವನ್ನು ಬಹಿರಂಗವಾಗಿ ಅವಮಾನಿಸಿದ್ದಾರೆ. ಆತನನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ತಂಜಿಮ್ ಕಮಿಟಿ ಕಾರ್ಯದರ್ಶಿ ಶಾನವಾಜ್ ಖಾನ್ ಮಾತನಾಡಿ, “ಪ್ರಪಂಚದಲ್ಲಿ ಹೆಣ್ಣಿಗೆ ಪೂಜೆ ಮಾಡುವ ಏಕೈಕ ದೇಶ ಭಾರತ. ಇಂತಹ ದೇಶದಲ್ಲಿ ಹುಟ್ಟಿದ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆರ್‌ಎಸ್‌ಎಸ್‌ ಇಂತಹ ಹೊಲಸು ಮಾತುಗಳನ್ನು ಕಲಿಸಿದೆ. ಧರ್ಮ ಧರ್ಮಗಳಲ್ಲಿ ವಿಷ ಬೀಜ ಬಿತ್ತಿ, ಶಾಂತಿಯ ರಾಜ್ಯದಲ್ಲಿ ಕೋಮು ಗಲಭೆ ನಡೆಸಲು ಪ್ರಯತ್ನಿಸುತ್ತಿರುವ ಕೋಮುವಾದಿ ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟದ ಮುಖಂಡ ಮಹಮ್ಮದ್ ಶೋಯೇಬ್ ಮಾತನಾಡಿ, “ಹಿಜಾಬ್ ವಿಷಯದಲ್ಲಿ ಬೆಳಕಿಗೆ ಬಂದಿದ ಮಂಡ್ಯದ ಮುಸ್ಕಾನ್ ಎಂಬ ವಿಧ್ಯಾರ್ಥಿನಿ ಕಾಲೇಜಿಗೆ ಬಂದರೆ ಹಲ್ಲೆ ಮಾಡುವುದಾಗಿ ಕಲ್ಲಡ್ಕ ಪ್ರಭಾಕರ್ ಭಟ್ ನೇರವಾಗಿ ಧಮಕಿ ಹಾಕಿದ್ದಾನೆ. ಯುವ ಪೀಳಿಗೆಗೆ ಕೋಮುವಾದಿ ಪಾಠ ಮಾಡಿ ಹಾದಿ ತಪ್ಪಿಸುವ ವಿಷ ಜಂತು ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ರಜ್ವಿ ರಿಯಾಜ್ ಸಾಬ್, ಇಸ್ಮಾಯಿಲ್ ಜಬೀವುಲ್ಲಾ, ಹಾಕಿ ಸೈಯದ್ ಆರೀಫ್, ಆದಿಲ್ ಖಾನ್, ಮಹಮ್ಮದ್ ಹಯಾತ್, ಇನಯಾತ್ ಅಲಿ ಖಾನ್, ಕೆ.ಹೆಚ್. ಮೆಹಬುಬ್, ಬ್ಯಾಟರಿ ಜಬೀವುಲ್ಲಾ, ಕಲಿಂವುಲ್ಲಾ ಖಾನ್, ಮನ್ಸೂರ್, ನವೀದ್, ಅಜ್ಮತ್, ದದೇಶ, ತಮನ ರಫೀಕ್, ಹೈದರ್, ಎನ್. ಉಸ್ಮಾನ್, ನೂರ್ ಅಯುಬ್ ಬುತ್ತಿ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...