ದಾವಣಗೆರೆ | ರೈತರ ಸಾಲ ಮನ್ನಾಗೆ ಆಗ್ರಹ

Date:

ಬರಪರಿಹಾರ ಕೆಲಸಗಳನ್ನು ಕೂಡಲೇ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ, ಕಾರ್ಮಿಕ ಸಂಘಟನೆ ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, “ಬ್ಯಾಂಕ್ ಸಾಲ ಸೇರಿದಂತೆ ರೈತರ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ವರ್ಷ ಪೂರ್ತಿ ವಿಸ್ತರಿಸಬೇಕು.ಆ ಮೂಲಕ ರೈತರು ಗುಳೇ ಹೋಗುವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಬರಪೀಡಿತ ಗ್ರಾಮಗಳಲ್ಲಿ ಉಚಿತ ಶುದ್ದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.ಶಾಲೆ. ಕಾಲೇಜು ಮಕ್ಕಳ ಶುಲ್ಕವನ್ನು ಮನ್ನಾ ಮಾಡಿ. ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ವರ್ಷವಿಡೀ ಉಚಿತ ಪಡಿತರ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಕೆರೆ ಜೋಡಣೆ ಯೋಜನೆಯನ್ನು ಜಾರಿಗೊಳಿಸಿ. ನೀರಿನ ಸಮಸ್ಯೆಯ ಶಾಶ್ವತ ಮುಕ್ತಿಗಾಗಿ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ 236 ತಾಲೂಕುಗಳ ಪೈಕಿ 161 ತೀವ್ರ, 34 ಸಾಮಾನ್ಯ ಬರ ಪೀಡಿತ ತಾಲೂಕುಗಳೆಂದು ಘೋಷಿಸಲ್ಪಟ್ಟಿವೆ. ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಆರಂಭ ಆಗಿಲ್ಲ. ಕಾರಣ ಪರಿಸ್ಥಿತಿ ಹದಗೆಟ್ಟು ರೈತರು ಆತ್ಮಹತ್ಯೆಯ ಹಾದಿ ಹಿಡಿಯುವ ಮೊದಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ಜಿಲ್ಲಾಧ್ಯಕ್ಷ ಮಧು ತೊಗಲೇರಿ, ಜಿಲ್ಲಾ ಕಾರ್ಯದರ್ಶಿ ನಾಗಸ್ಥಿತ, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜಪ್ಪ, ಭೀಮಣ್ಣ ಮಾಯಕೊಂಡ, ನಾಗರಾಜ ರಾಮಗೊಂಡನಹಳ್ಳಿ, ನೀರ್ಥಡಿ ಲೋಕೇಶ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...