ದಾವಣಗೆರೆ | ಗ್ರಾಮಕ್ಕೆ ಬಾರದ ಸಚಿವ; ಕಾದು ಸುಸ್ತಾದ ಮನರೇಗಾ ಕಾರ್ಮಿಕರು

Date:

ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಗೆ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ತೆರಳಿದ್ದರು,. ಅದಕ್ಕೂ ಮುನ್ನ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಿಗದಿಯಾಗಿತ್ತು. ಅದಕ್ಕಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೆ, ಸಚಿವರು ಗ್ರಾಮದತ್ತ ಸುಳಿಯಲೇ ಇಲ್ಲ.

ಸಚಿವರು ಬಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾರ್ಮಿಕ ಮಂಜಣ್ಣ, “ನಾವು ಮನರೇಗಾ ಕೂಲಿಯನ್ನು ಆಶ್ರಯಿಸಿ ಬದುತ್ತಿದ್ದೇವೆ. ಆದರೆ, ನಮಗೆ ಸರಿಯಾಗಿ ಕೂಲಿ ಕೊಡುತ್ತಿಲ್ಲ. ನಾವು ಹೇಗೆ ಜೀವನ ಮಾಡಬೇಕು? ಇವತ್ತು ಸಚಿವರು ಬರುತ್ತಾರೆ. ಅವರಿಗೆ ನಮ್ಮ ಸಮಸ್ಯೆಗಳನ್ನು ತಿಳಿಸಬೇಕೆಂದು ಕಾದಿದ್ದೇವೆ. ಆದರೆ, ಸಚಿವರು ಬರಲೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವರು ಬರುತ್ತಾರೆಂದು ಬೆಳಗ್ಗೆಯಿಂದಲೂ ಕಾಯಿಸಿದ್ದಾರೆ. ಊಟ, ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಸರ್ಕಾರ ಬಡವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...