ದಾವಣಗೆರೆ | ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

Date:

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.

“ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಅನುಷ್ಠಾನ ಮತ್ತು ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ಒಳಗಾಗಿ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದಲ್ಲಿ, ಅಧಿವೇಶನದ ಒಳಗೇ ಇಷ್ಟಲಿಂಗ ಪೂಜೆ ನಡೆದರೂ ಅಚ್ಚರಿ ಪಡಬೇಕಾಗಿಲ್ಲ” ಎಂದು ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರ ಹುಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, “ಪಂಚಮಸಾಲಿ ಸಮಾಜದ ನ್ಯಾಯಯುತ ಬೇಡಿಕೆ ಕುರಿತು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು.‌ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ಮಾಡಲಾಗುವುದು” ಎಂಬ ಭರವಸೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ‌ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...