ದಾವಣಗೆರೆ | ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿದ ಪ್ರಕರಣ; ಎಫ್‌ಐಆರ್‌ ದಾಖಲು

Date:

ಕಲ್ಯಾಣ ಮಂಟಪವೊಂದರಲ್ಲಿ ಒಳಚರಂಡಿ ಸ್ವಚ್ಛಗೊಳಿಸಲು ಮ್ಯಾನ್‌ಹೋಲ್‌ಗೆ ಕೂಲಿ ಕಾರ್ಮಿಕರನ್ನು ಇಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದ ಧರ್ಮಶಾಲಾ ಕಲ್ಯಾಣ ಮಂಟಪದ ಒಳಚರಂಡಿಗೆ ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಇಳಿಸಲಾಗಿದೆ. ಮಂಟಪದ ಮಾಲೀಕರಾದ ರಾಜನಹಳ್ಳಿ ಜಾನಬಾಯಿ, ರಾಜನಹಳ್ಳಿ ಶ್ರೀನಿವಾಸಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಠಾಣೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್ (ಯುಜಿಡಿ) ಪಿ.ಮಧುಸೂಧನ್ ದೂರು ದಾಖಲಿಸಿದ್ದಾರೆ.

ಒಳಚರಂಡಿ ಸ್ವಚ್ಛತೆಗಾಗಿ ಪಾಲಿಕೆಗೆ ದೂರು ನೀಡದೆ, ಕಾರ್ಮಿಕರನ್ನು ಚರಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಹೀಗಾಗಿ, ಮಂಟಪದ ಮಾಲೀಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ– 2013 ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...