ದಾವಣಗೆರೆ | ಪೊಲೀಸರೊಂದಿಗೆ ಯುವಕರ ವಾಗ್ವಾದ; ಕಾಂಗ್ರೆಸ್‌ ಮುಖಂಡ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

Date:

ನಡುರಾತ್ರಿಯಲ್ಲಿ ರಸ್ತೆ ಬದಿ ನಿಂತಿದ್ದ ಯುವಕರನ್ನು ಮನೆಗೆ ಹೋಗಿ ಎಂದಿದ್ದಕ್ಕೆ ಯುವಕರು ಪೊಲೀಸರು ಜೊತೆ ವಾಗ್ವಾದಕ್ಕಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ಕಾಂಗ್ರೆಸ್‌ ಮುಖಂಡ ಸೇರಿ ನಾಲ್ವರ ವಿರುದ್ಧ ನಗರದ ಆಜಾದ್‌ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ.16ರ ರಾತ್ರಿ ಸುಮಾರು 11.45ರ ವೇಳೆಗೆ ಆಜಾದ್ ನಗರ ಠಾಣೆಯ ಪೊಲೀಸರು ಗಸ್ತು ನಡೆಸುತ್ತಿದ್ದರು. ಈ ವೇಳೆ ಮಾಗನಹಳ್ಳಿ ರಸ್ತೆಯಲ್ಲಿ ಕಾಂಗ್ರೆಸ್‌ ಮುಖಂಡ ಅಯೂಬ್ ಪೈಲ್ವಾನ್ ಅವರ ಪುತ್ರ ಹಸನ್ ಮತ್ತು ನಾಲ್ವೈದು ಯುವಕರು ನಿಂತಿದ್ದರು. ಅವರನ್ನು ಮನೆಗೆ ಹೋಗಿ ಎಂದಿದ್ದಕ್ಕೆ, ಯುವಕರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಯುವಕರ ಫೋಟೋ ತೆಗೆಯಲು ಮುಂದಾದಗ ಗಲಾಟೆ ನಡೆದಿದೆ. ಸ್ಥಳಕ್ಕೆ ಇಮ್ರಾನ್ ಪಾಷಾ ತೆರಳುವಷ್ಟರಲ್ಲಿ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಹಾಗೂ ಸಹೋದರ ಸಾಕ್ ಪೈಲ್ವಾನ್ ಕೂಡ ಸ್ಥಳಕ್ಕೆ ಬಂದಿದ್ದರು. 11 ಗಂಟೆ ಬಳಿಕ ಯಾರೂ ಓಡಾಡಬಾರದೆಂದು ಯಾವ ಕಾನೂನಿನಲ್ಲಿದೆ ಎಂದು ಆಯೂಬ್ ಪೈಲ್ವಾನ್ ಪೊಲೀಸರನ್ನು ಏಕವಚನದಲ್ಲಿ ನಿಂದಿಸಿದ್ದಾರೆ.

ಘಟನೆ ಸಂಬಂಧ ಅಯೂಬ್ ಪೈಲ್ವಾನ್, ಸಾಕ್ ಪೈಲ್ವಾನ್, ಅಯೂಬ್ ಪೈಲ್ವಾನ್ ಪುತ್ರ ಹಸನ್ ಹಾಗೂ ಹುಸೇನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...