ದೇವನಹಳ್ಳಿ ರೈತ ಹೋರಾಟ | ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶನ: ಭೂಮಿ ಕೊಡಲ್ಲ ಎಂದು ಸಹಿ

Date:

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ(ಜುಲೈ14) 1197 ದಿನಗಳನ್ನು ತಲುಪಿದ್ದು, ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ. ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ ಹಂತ ತಲುಪಿರುವ ಈ ಹೊತ್ತಿನಲ್ಲಿ ಭೂಮಿ ಕೊಡುವುದಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ಈ ನಡುವೆ ಚನ್ನರಾಯಪಟ್ಟಣ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ 13 ಹಳ್ಳಿಗಳ ರೈತರು ಭೂಮಿ ಕೊಡುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿ ಒಗ್ಗಟ್ಟು ಪ್ರದರ್ಶಿಸಿದರು.

ಕಳೆದ ಹತ್ತು ದಿನಗಳಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಗ್ರಾಮ ಸಭೆಗಳನ್ನು ನಡೆಸಲಾಗಿದ್ದು, ಒಟ್ಟಾರೆ 13 ಹಳ್ಳಿಗಳ ಶೇ.73 ರಿಂದ ಶೇ.80 ರಷ್ಟು ತಮ್ಮ ರೈತರು ಭೂಮಿ ಕೊಡುವುದಿಲ್ಲ ಎಂದು ಸಹಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮೇಧಾ ಪಾಟ್ಕರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ ಗ್ರಾಮದ 43.14 ಎಕರೆ (ಶೇ.75), ಹರಳೂರು ಗ್ರಾಮದ 12.5 ಎಕರೆ ಎಕರೆ ಶೇ.100, ಪೋಲನಹಳ್ಳಿ 218 ಎಕರೆ (ಶೇ.71), ನಲ್ಲೂರು ಗ್ರಾಮದ 73 ಎಕರೆ (ಶೇ.70), ಮಲ್ಲೇಪುರ ಗ್ರಾಮದ 38 ಎಕರೆ (ಶೇ.100), ನಲ್ಲಪ್ಪನಹಳ್ಳಿ ಗ್ರಾಮದ 81 ಎಕರೆ (ಶೇ.76), ಚೀಮಾಚನಹಳ್ಳಿ ಗ್ರಾಮದ 97 ಎಕರೆ (ಶೇ.65), ಮಟ್ಟಬಾರ್ಲು 180 ಎಕರೆ (ಶೇ.100), ಮುದ್ದೇನಹಳ್ಳಿ ಗ್ರಾಮದ 68 ಎಕರೆ (ಶೇ.92), ಚನ್ನರಾಯಪಟ್ಟಣ ಗ್ರಾಮದ 160 ಎಕರೆ (ಶೇ.68), ಎಸ್. ತೆಲ್ಲಹಳ್ಳಿ ಗ್ರಾಮದ 77.7 ಎಕರೆ (ಶೇ.100), ಹ್ಯಾಡಾಳ ಗ್ರಾಮದ 85 ಎಕರೆ (ಶೇ.53), ಗೋಕರೆ ಬಚ್ಚೇನಹಳ್ಳಿ 139 ಎಕರೆ(ಶೇ.54) ಜಮೀನಿನ ಖಾತೆದಾರರು ಭೂಮಿ ಕೊಡುವುದಿಲ್ಲ ಎಂದು ನಿರ್ಣಯಿಸಿದ್ದಾರೆ.

“ನಾವೇ ಅಧಿಕಾರಿಕ್ಕೆ ತಂದ ಸರ್ಕಾರ ನಮ್ಮ ವಿರುದ್ಧ ತೀರ್ಮಾನ ತೆಗೆದುಕೊಂಡರೆ, ನಾವೇ ಮುಂದೆ ನಿಂತು ಇಂಥ ಜನವಿರೋಧಿ ಸರ್ಕಾರವನ್ನು ಉರುಳಿಸಬೇಕಾಗುತ್ತದೆ. ಸರ್ಕಾರ ನಮ್ಮ ವಿರುದ್ಧವಾಗಿ ತೀರ್ಮಾನ ತೆಗೆದುಕೊಂಡರೆ, ಅದೇ ಅಂತಿಮವಲ್ಲ” ಎಂದು ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರಾದ ಮೀನಾಕ್ಷಿ ಸುಂದರಂ ಹೇಳಿದರು.

“ಸರ್ಕಾರ ಎಕರೆಗೆ ಮೂರೂವರೆ ಕೋಟಿ ರೂಪಾಯಿ ಪರಿಹಾರ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ, ಅದು ಯಾರ ಹಣ? ಅದು ನಮ್ಮದೇ ತೆರಿಗೆ ಹಣ. ನೀವು ರೈತರಿಗೆ ಮೂರೂವರೆ ಕೋಟಿ ಹಣ ಕೊಟ್ಟು ಕೈಗಾರಿಕೋದ್ಯಮಿಗಳಿಗೆ ಕಡಿಮೆ ಹಣಕ್ಕೆ ಭೂಮಿ ಕೊಡುತ್ತೀರಾ. ನಮ್ಮ ತೆರಿಗೆ ಹಣವನ್ನು ಲೂಟಿ ಮಾಡುವುದಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು” ಎಂದು ಪ್ರಶ್ನಿಸಿದರು.

“ಇಲ್ಲಿನ ರೈತರಿಗೆ ಬೆಳೆಗೆ ಬೆಂಬಲ ನೀಡದ ನೀವು, ಯಾವುದೋ ದೇಶದಿಂದ ಬರುವ ಕೈಗಾರಿಕೋದ್ಯಮಗಳಿಗೆ ತೆರಿಗೆ ಸೇರಿದಂತೆ ಎಲ್ಲ ಹಂತದಲ್ಲಿ ವಿನಾಯಿತಿ ನೀಡುತ್ತಿದ್ದೀರಾ. ನೀವು ರೈತರಿಗೆ ಯಾಕೆ ಬೆಂಬಲ ನೀಡುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀರನ್ನು ಪ್ರಶ್ನಿಸಿದರು. ಈ ಅನ್ಯಾಯವನ್ನು ಪ್ರಶ್ನಿಸುವುದಕ್ಕಾಗಿಯೇ ಇಲ್ಲಿನ ರೈತರು ಹೋರಾಟ ಮಾಡುತ್ತಿದ್ದಾರೆ” ಎಂದರು.

“ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅವಕಾಶವಿದೆ ಎಂದು ಸಚಿವರು ವ್ಯಂಗ್ಯವಾಗಿ ಹೇಳಿದ್ದಾರೆ. ಆದರೆ, ಚಳವಳಿಯೊಂದು ನಿರಂತರವಾಗಿ ನಡೆಯುತ್ತಿದ್ದರೆ, ಅದು ಕಿವುಡು ಕಿವಿಗಳನ್ನೂ ಕೇಳುವಂತೆ ಮಾಡುತ್ತದೆ. ಪ್ರಜಾಪ್ರಭುತ್ವ ಎಂದರೆ ಪ್ರತಿಭಟನೆ ಮಾಡುವುದಷ್ಟೇ ಅಲ್ಲ, ಪ್ರಜಾಪ್ರಭುತ್ವ ಎಂದರೆ ಹೋರಾಟಗಾರರು ಮತ್ತು ರೈತರು ಹೇಳಿದ್ದನ್ನು ಕೇಳಿಸಿಕೊಳ್ಳುವುದು” ಎಂದು ಸಚಿವರಿಗೆ ಕಿವಿಮಾತು ಹೇಳಿದರು.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ: ಬೆಂಗಳೂರಿಗೆ ಬಂದಿದ್ದ ಗುಂಡ್ಲುಪೇಟೆ ರೈತ ಕುಸಿದು ಬಿದ್ದು ಸಾವು

“ರೈತರಿಲ್ಲದೆ ಯಾರೂ ಇಲ್ಲ, ಕಾರ್ಮಿಕ ವರ್ಗ ಕೂಡ ರೈತರ ಜೊತೆಗಿದೆ. ನಾವು ಭೂಮಿ ಕೊಡಲ್ಲ ಎಂದು ನಿರ್ಧಾರಕ್ಕೆ ಬಂದಿದ್ದೇವೆ. ಇದರಲ್ಲಿ ಬೇರೆ ಯಾವುದೇ ಚೌಕಾಸಿಗೆ ಅವಕಾಶ ಇಲ್ಲ. ಭೂಮಿ ನಮ್ಮದು ನಾವು ಕೊಡುವುದಿಲ್ಲ. ನಾವು ರೈತರ ಜೊತೆಗೆ ನಿಲ್ಲುತ್ತೇವೆ. ನಾಳೆ ನಾವು 1198ನೇ ದಿನಕ್ಕೆ ಕಾಲಿಡುತ್ತೇವೆ; ಇದಕ್ಕೆ ಪೂರ್ಣವಿರಾಮ ಹಾಕುತ್ತೇವೆ” ಎಂದು ಹೇಳಿದರು.

ಪ್ರತಿಜ್ಞೆ1

ಹಿರಿಯ ಹೋರಾಟಗಾರರಾದ ಎಸ್ ಆರ್ ಹಿರೇಮಠ್ ಮಾತನಾಡಿ, “ಚನ್ನರಾಯಪಟ್ಟಣದ ರೈತರಿಗೆ ಇಂದು ಇಡೀ ದೇಶದ ಬೆಂಬಲ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಎಂದರೇನು ಎಂಬುದರ ಬಗ್ಗೆ ತಿಳಿದುಕೊಳ್ಳುವುದಷ್ಟೇ ಅಲ್ಲ, ಅದಕ್ಕಾಗಿ ನಾವೆಲ್ಲರೂ ಹೋರಾಟ ಮಾಡಬೇಕಾಗಿದೆ. ಕೆಲವು ತಜ್ಞರು ಕೂತು ಪರಿಸರದ ಬಗ್ಗೆ ‘ನಾರಿಕರ ವರದಿ’ ಸಿದ್ಧಪಡಿಸಿದ್ದೇವೆ. ನೈಸರ್ಗಿಕ ಸಂಪನ್ಮೂಲಗಳೇ ನಿಜವಾದ ಸಂಪತ್ತು ಎಂಬುದನ್ನು ಘೋಷಣೆ ಮಾಡಿದ್ದೇವೆ. ಪ್ರಕೃತಿಗೆ ಹತ್ತಿರವಿರುವವರು ಅದನ್ನು ನಿರ್ವಹಣೆ ಮಾಡಬೇಕು. ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಸ್ವಾರ್ಥ ರಾಜಕಾರಣಿಗಳ ಕೈಗೆ ಹೋಗಬಾರದು” ಎಂದರು.

“ಸರ್ಕಾರಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು, ಇಂದು ಸರ್ಕಾರಗಳು ಮಾಡುತ್ತಿರುವುದು ಸಂವಿಧಾನ ಬಾಹಿರ. ಅವರೆಲ್ಲಾ ಸಾರ್ವಜನಿಕ ಸೇವಕರು, ನಾವೇ ಇದರ ಮಾಲೀಕರು. ಎಲ್ಲರಿಗೂ ಇಂದು ಪರಿಸರ ಬಹಳ ಮುಖ್ಯವಾಗಿದೆ. ಪರಿಸರ ಮಾಲಿನ್ಯವಷ್ಟೇ ಅಲ್ಲ, ಇಂದು ಅದು ತೀವ್ರ ಬಿಕ್ಕಟ್ಟಾಗಿದೆ. ಅದನ್ನು ಗಮನಿಸುವ ನಾಯಕತ್ವ ನಮಗೆ ಬೇಕಿದೆ” ಎಂದು ಹೇಳಿದರು.

“ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವ ನಾಯಕತ್ವ ನಮಗೆ ಬೇಕಿದೆ. ಪ್ರತಿಯೊಬ್ಬರಿಗೂ ಗೌರವದ ಬದುಕು ಕಟ್ಟಿಕೊಡಬೇಕು. ಆದ್ದರಿಂದ, ನಾವೆರಲ್ಲರೂ ಸೇರಿ ಹೋರಾಟ ಮಾಡಬೇಕು. ಉಪ್ಪಿನ ಸತ್ಯಾಗ್ರಹ ಹಾಗೂ ಮಹಾಡ್ ಸತ್ಯಾಗ್ರಹ ಮಾದರಿಯಲ್ಲಿ ಚಳವಳಿ ಮಾಡಬೇಕು. ಅವರ ಹೋರಾಟಗಳು ಹೊಸತಕ್ಕೆ ನಾಂದಿ ಹಾಡಿತು” ಎಂದು ತಿಳಿಸಿದರು.

“ದೇವನಹಳ್ಳಿಯ ಚನ್ನರಾಯಪಟ್ಟಣ ಇಂದು ಇಡೀ ದೇಶಕ್ಕೆ ಪರಿಚಿತ. ನೈತಿಕತೆ ಹಾಗೂ ಅಸ್ಮಿತೆ ಇಟ್ಟುಕೊಂಡು ನಡೆಸಿದ ದೊಡ್ಡ ಭೂಮಿ ಹೋರಾಟ ಇದಾಗಿದೆ. ಇಷ್ಟು ದೀರ್ಘಕಾಲ ಚಲಬಿಡದೆ ಹೋರಾಟ ನಡೆಸಿಕೊಂಡು ಬಂದಿರುವುದು ಸಣ್ಣ ವಿಷಯವಲ್ಲ. ಸರಕು ಬಿಕರಿಯಾಗುತ್ತದೆ, ಬದುಕು ಬಿಕರಿಯಾಗುವುದಿಲ್ಲ, ಮಾರಾಟಗಾರರಿಗೆ ಭೂಮಿ ಕೂಡ ಒಂದು ಸರಕು, ಆದರೆ ರೈತರಿಗಲ್ಲ” ಎಂದು ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಹೇಳಿದರು.

“ಕೈಗಾರಿಕೆಗಾಗಿ ನಂಜನಗೂಡಿನಲ್ಲಿ ಸಹ ಬೇಕಾಬಿಟ್ಟಿ ಭೂಮಿ ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ನಮ್ಮ ಜೊತೆಗೆ ಹೋರಾಟ ಮಾಡುತ್ತಿದ್ದ ಕೆಲವರು ಹೆಚ್ಚು ಬೆಲೆ ಸಿಕ್ಕ ಬಳಿಕ ಭೂಮಿ ಕೊಡಲು ಒಪ್ಪಿಕೊಂಡಿದ್ದರು. ಆದರೆ, ಇಲ್ಲಿ ಹೆಚ್ಚಿನ ಪರಿಹಾರಕ್ಕಾಗಿ ಹೋರಾಟ ನಡೆಯುತ್ತಿಲ್ಲ. ಅದಕ್ಕಾಗಿಯೇ ಇದೊಂದು ಸತ್ವಯುತ ಹೋರಾಟ ಎಂದರೆ ತಪ್ಪಾಗದು. ಸಾಹಿತಿಗಳು, ಕಲಾವಿದರು, ದಲಿತ ಚಳವಳಿ ಹಾಗೂ ಬುದ್ದಿಜೀವಿಗಳು ಸೇರಿದಂತೆ ದೆಹಲಿ ಮಟ್ಟದಲ್ಲೂ ಚನ್ನರಾಯಪಟ್ಟಣ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಚನ್ನರಾಯಪಟ್ಟಣ ಇಂದು ವಿಶ್ವಮಟ್ಟದಲ್ಲಿ ಹೆಸರಾಗಿದ್ದು, ಹಾಗೇ ಉಳಿಯಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು” ಎಂದು ಕರೆ ನೀಡಿದರು.

“ರೈತರ ಅಸಹಾಯಕತೆ ಬಳಸಿಕೊಳ್ಳುವ ಕೆಲವು ಶಕ್ತಿಗಳಿವೆ, ಭೂಮಿ ಕೊಡುತ್ತೇವೆ ಎಂದು ಹೇಳಿದವರೂ ಸಹ ಅಸಹಾಯಕರು ಇರಬಹುದು. ಆದರೆ, ನಮ್ಮ ಹೋರಾಟವನ್ನು ಗೆದ್ದೇ ಗೆಲ್ಲುತ್ತೇವೆ. ಸಂಕಲ್ಪ ಸಮಾವೇಶ 13 ಹಳ್ಳಿಗಳಿಗೆ ಮಾತ್ರ ಸೀಮಿತವಾಗಿಲ್ಲ, ಇಡೀ ರಾಜ್ಯದ ಕೃಷಿ ಭೂಮಿ, ಜಲಮೂಲ, ಅರಣ್ಯ ಹಾಗೂ ಖನಿಜ ಸಂಪತ್ತು ಉಳಿಸುವುದಕ್ಕಾಗಿಯೇ ಮಾಡುತ್ತಿರುವ ಹೋರಾಟ. ಇದಕ್ಕೆಲ್ಲಾ ಪ್ರೇರಣೆಯೇ ಚನ್ನರಾಯಪಟ್ಟಣ ಭೂಮಿ ಹೋರಾಟ. ನಾವೆಲ್ಲರೂ ನಾಳೆ ಗೆದ್ದೇ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ರೈತ ತಾಯಂದರಿರು ಮನಸ್ಸ ಮಾಡದೇ ಇದ್ದಿದ್ದರೆ ಈ ಹೋರಾಟ ಇಷ್ಟು ಗಟ್ಟಿಯಾಗಿ ನಿಲ್ಲುತ್ತಿರಲಿಲ್ಲ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಶ್ಲಾಘಿಸಿದರು. “ಬದುಕಿಗೆ ಭೂಮಿ ಬೇಕು ಎನ್ನುತ್ತಾರೆ. ಆದರೆ, ಸ್ವಾಭಿಮಾನ ಹಾಗೂ ಘನತೆಯ ಬದುಕಿಗೆ ಭೂಮಿ ಬೇಕು. ಹಳ್ಳಿಗಾಡಿನ ಭೂಹೀನರು ಅದನ್ನೇ ಯಾವಾಗಲೂ ಬಯಸುತ್ತಾರೆ. ಇದು ಸಂಕಲ್ಪ ಸಮಾವೇಶ ಎಂದು ಕರೆದಿದ್ದೀರಾ, 13 ಹಳ್ಳಿಗಳು ಸಂಕಲ್ಪ ಮಾಡಿದ್ದೀರಾ, ಮಹಿಳೆಯರು ಮುಂದೆ ನಿಂತು ಮಾಡಿದ ಹೋರಾಟಕ್ಕೆ ಎಂದಿಗೂ ಸೋಲಾಗಿಲ್ಲ. ನಾಳೆ ನಾವು ಗೆದ್ದೇಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಜ್ಞೆ2

“ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ ಅವರ ಮಾತುಗಳು ಭಿನ್ನವಾಗಿವೆ. ಹಸಿರು ವಲಯ ಎಂದು ಘೋಷಣೆ ಮಾಡುವ ಬೆದರಿಕೆ ಹಾಕಲಾಗುತ್ತದೆ. ಭೂಮಿ ಮಾಲೀಕರು ಏನು ಮಾಡಬೇಕು ಎಂದು ನಿರ್ಧಾರ ಮಾಡುತ್ತಾರೆ. ಅದನ್ನೆಲ್ಲಾ ಹೇಳುವುದಕ್ಕೆ ನೀವ್ಯಾರು? ಭೂಮಿ ನೀವೇ ಕೊಟ್ಟಿದ್ದರೆ ಹೀಗೆಲ್ಲಾ ಹೇಳಿದಂತೆ ಕೇಳಬಹುದಿತ್ತು. ಆದರೆ, ಈ ಭೂಮಿ ನಮ್ಮದು. ನೀವು ಸ್ವಾಧೀನ ಕೈಬಿಟ್ಟರೆ ಇದು ಹಸಿರು ವಲಯವಾಗಿಯೇ ಉಳಿಯುತ್ತದೆ. ನಾವೆಲ್ಲರೂ ರೈತರ ಜೊತೆಗಿರುತ್ತೇವೆ, ಈ ಹೋರಾಟವನ್ನು ಗೆದ್ದೇ ಗೆಲ್ಲುತ್ತೇವೆ” ಎಂದು ಭರವಸೆ ವ್ಯಕ್ತಪಡಿಸಿದರು.

ಜನಶಕ್ತಿ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಮಾತನಾಡಿ, “13 ಹಳ್ಳಿಗಳ ಭೂತಪಸ್ವಿಗಳಿಗೆ ಶರಣು, 1200 ದಿನಗಳ ದೊಡ್ಡ ಮಹಾತಪಸ್ಸು ಮಾಡಿದ್ದೀರ. ಇಂಥಹ ಧೀರ್ಘ ಹಾಗೂ ಸಾತ್ವಿಕ ತಪಸ್ಸಿಗೆ ನಾಳೆ ಒಳ್ಳೆ ಫಲ ಸಿಗಲೇಬೇಕು” ಎಂದರು.

“ಎಲ್ಲ ಕಡೆ ಭೂಮಿ ಕಬಳಿಸುತ್ತಿರುವಾಗ ನಮ್ಮನ್ನು ತಡೆಯುವವರೇ ಇಲ್ಲ ಎನ್ನುತ್ತಿರುವಾಗ, ಸರ್ಕಾರಗಳ ಅಹಂಕಾರವನ್ನು 13 ಹಳ್ಳಿಗಳ ಜನ ತಡೆದಿದ್ದಾರೆ. ಅಂತಿಮ ಅಧಿಸೂಚನೆ ಬಂದ ಬಳಿಕವೂ ಹಲವು ಜನರ ಬೆಂಬಲ ಸಿಕ್ಕಿದೆ. ಇದು 13 ಹಳ್ಳಿಗಳ ಹೋರಾಟವಲ್ಲ, ಇಡೀ ದೇಶದ ಹೋರಾಟ. ಸ್ಪೇನ್‌ನಿಂದಲೂ ನಮಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ನೂರಕ್ಕೆ ನೂರು ನಾಳಿನ ಫಲಿತಾಂಶ ನಮ್ಮ ಪರವಾಗಿ ಆಗೇ ಆಗುತ್ತದೆ. ನಾಳಿನ ಸಭೆಗೆ ಎಲ್ಲ ತಾಯಂದಿರೂ ಸಿಹಿ ತನ್ನಿ, ‘ಸಿಹಿ ತಿಂದು, ಸಿಹಿ ಸುದ್ದಿ ಕೊಡಿ’ ಎಂದು ಮುಖ್ಯಮಂತ್ರಿಗಳನ್ನು ಕೇಳೋಣ” ಎಂದರು.

“ಇಲ್ಲಿರುವ ಸಂಘಟನೆಗಳೆಲ್ಲವೂ ಕಾವಲು ಪಡೆ ಮಾತ್ರ, ನಿಮ್ಮ ಭೂಮಿ ಕೈತಪ್ಪುವುದಕ್ಕೆ ನಾವು ಬಿಡುವುದೇ ಇಲ್ಲ. ಈ ತಪಸ್ಸಿಗೆ ನಾಳೆ ಪ್ರತಿಫಲ ಸಿಗಬಹುದು. ನಮ್ಮ ಭೂಮಿ ಬಲವಂತದ ವಶಪಡಿಸಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಿದರೆ, ಶಿವನ ತಪ್ಪಸ್ಸು ಕೆಡಿಸಿದರೆ ಪ್ರಳಯ ಸೃಷ್ಠಿ ಆಗುತ್ತದೆ. ಇಲ್ಲೂ ಕೂಡ ಅದೇ ಆಗುತ್ತದೆ. ಅಂಥ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕದಿರೆ ಅವರಿಗೇ ತೊಂದರೆ; ನಮಗೇನೂ ಆಗುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಇಂದಿರಾ ಕೃಷ್ಣಪ್ಪ, ಬಡಗಲಪುರ ನಾಗೇಂದ್ರ, ಎಸ್.ಆರ್. ಹಿರೇಮಠ್, ಟಿ.ಯಶವಂತ್, ಮೀನಾಕ್ಷಿ ಸುಂದರಂ, ಗುರುಪ್ರಸಾದ್ ಕೆರಗೋಡು, ಕೆವಿ ಭಟ್, ಚಾಮರಸ ಪಾಟೀಲ್, ಎಚ್.ಆರ್. ಬಸವರಾಜಪ್ಪ, ಮುಖ್ಯಮಂತ್ರಿ ಚಂದ್ರು, ದೇವಿ, ಚುಕ್ಕಿ ನಂಜುಂಡಸ್ವಾಮಿ, ಕಾಳಪ್ಪ, ಅಪ್ಪಣ್ಣ, ಜಿಜಿ ನಾರಾಯಣಸ್ವಾಮಿ, ಆಂಜನೇಯ ರೆಡ್ಡಿ, ನೂರ್ ಶ್ರೀಧರ್, ನಂಜಪ್ಪ ನಲ್ಲಪ್ಪನಹಳ್ಳಿ, ಮಾರೇಗೌಡ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...