ಕರ್ನೂಲ್ ಬಳಿ ನಡೆದ ಸ್ಲೀಪರ್ ಕೋಚ್ ಬಸ್ ದುರಂತದ ಹಿನ್ನೆಲೆಯಲ್ಲಿ, ಇಂದು ಬೆಳಗಿನ ಜಾವ ದೇವನಹಳ್ಳಿ ಸಮೀಪ ಸಾರಿಗೆ ಇಲಾಖೆ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ಸೀಜ್ ಮಾಡಿದ್ದಾರೆ.
ಸಾರಿಗೆ ಇಲಾಖೆಯ ಅಪರ ಆಯುಕ್ತೆ ಓಂಕಾರೇಶ್ವರಿ ಹಾಗೂ ಜಂಟಿ ಆಯುಕ್ತೆ ಶೋಭಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೇವನಹಳ್ಳಿ ಏರ್‌ಪೋರ್ಟ್ ಟೋಲ್ ಬಳಿ ಹೊರ ರಾಜ್ಯ ನೊಂದಣಿಯ ಖಾಸಗಿ ಸ್ಲೀಪರ್ ಕೋಚ್ ಬಸ್ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆಯ ವೇಳೆ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಕೊರತೆ, ಹಾಗೂ ನಿಯಮ ಉಲ್ಲಂಘನೆ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು 30ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ಸೀಜ್ ಮಾಡಿದ್ದಾರೆ. ಹೈದರಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗಳೂ ಇದರಲ್ಲಿ ಸೇರಿವೆ.
ಇದನ್ನೂ ಓದಿ: ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ
ಸೀಜ್ ಆದ ಬಸ್ಗಳಲ್ಲಿದ್ದ ಪ್ರಯಾಣಿಕರಿಗೆ ದೇವನಹಳ್ಳಿ ಟೋಲ್ ನಿಂದ ಮೆಜೆಸ್ಟಿಕ್‌ವರೆಗೆ ಬದಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.





