ವರುಣಾ ಕ್ಷೇತ್ರ | ಸಿದ್ದರಾಮಯ್ಯ ಪರ ದೇವನೂರ ಮಹಾದೇವ ಮತಯಾಚನೆ

Date:

  • ಸೋಮಣ್ಣನ ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ
  • ಯಡಿಯೂರಪ್ಪ ಎಂಬ ಬೃಹತ್‌ ಮರಕ್ಕೆ ವಿಷ ನೀಡಿ ತಾನೆ ಒಣಗುವಂತೆ ಮಾಡಿದ್ದಾರೆ

ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಾಡಿನ ಸಾಕ್ಷಿಪ್ರಜ್ಞೆ, ಸಾಹಿತಿ, ಚಿಂತಕ ದೇವನೂರ ಮಹಾದೇವ ಅವರು ಬುಧವಾರ ಮತ ಯಾಚಿಸಿದರು.

2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿತ್ತು. ಆಗ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ, ನೇರವಾಗಿ ಹೋಗಿ ದೇವನೂರ ಮಹಾದೇವ ಅವರನ್ನು ಭೇಟಿ ಮಾಡಿದ್ದ, ಆಶೀರ್ವಾದ ಪಡೆದಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಖುದ್ದು ದೇವನೂರ ಮಹಾದೇವ ಅವರೇ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚಿಸಿ ಗಮನ ಸೆಳೆದಿದ್ದಾರೆ. ದಲಿತ ಮುಖಂಡರೊಂದಿಗೆ ಮತಯಾಚಿಸುವ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ದೇವನೂರ ಮಹಾದೇವ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ರಾಜಕೀಯ ಪಕ್ಷಗಳ ಪ್ರಣಾಳಿಕೆ ಎಂದರೆ ಜನತಾ ಜನಾರ್ಧನನಿಗೆ ನೀಡುವ ವಾಗ್ದಾನ. ಅದನ್ನು ಪಕ್ಷ ಈಡೇರಿಸದೇ ಇದ್ದರೆ ಮಹಾಪಾಪ’ ಎಂದು ತುಂಬಾ ಖಚಿತವಾಗಿ ಆತ್ಮವಿಶ್ವಾಸದಿಂದ ನುಡಿದಿದ್ದರು. ಅಧಿಕಾರಕ್ಕೆ ಬರುವವರು ಹೇಗಿರಬೇಕು ಎನ್ನುವಂತೆ ಇವರ ಮಾತಗಳಿದ್ದವು. ಆದರೆ, ಅವರ ಅಧಿಕಾರದಲ್ಲಿ ನಡೆದದ್ದೆಲ್ಲವೂ ಜನ ವಿರೋಧಿ ಕೆಲಸಗಳೇ,” ಎಂದರು.

“2013-14ನೇ ಸಾಲಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ನೀಡಿದ್ದ ಪ್ರಣಾಳಿಕೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಶೇ.50 ರಷ್ಟು ಬೆಂಬಲ ಬೆಲೆ ನೀಡುತ್ತೇವೆ ಎಂದು ಹೇಳಿದ್ದರು. ಅದು ಏನಾಯ್ತು? ಕೃಷಿ ಉತ್ಪನ್ನಗಳಿಗೆ ಕಾಂಗ್ರೆಸ್ ಕಾಲದಲ್ಲಿ ಸಿಗುತ್ತಿದ್ದಕ್ಕಿಂತ ಕಡಿಮೆ ಬೆಲೆ ಸಿಗುತ್ತಿದೆ” ಎಂದು ಹೇಳಿದರು.

ದೇವನೂರ ಮಹಾದೇವ

“ಮೋದಿ ಆಡಿದ ಮಾತುಗಳನ್ನು ಮತದಾರರು ತುಂಬಾ ನಂಬಿದ್ದರು. ಬಹಳ ಬೆಲೆ ಕೊಟ್ಟಿದ್ದರು. ಈಗಲೂ ಒಂದಿಷ್ಟು ಜನ ನಂಬುತ್ತಿದ್ದಾರೆ. ನನ್ನ ಪ್ರಶ್ನೆ ಇಷ್ಟೆ, ಮೋದಿಯವರೇ ನಿಮ್ಮ ಮಾತಿಗೆ ನಮ್ಮ ಜನ ಇಷ್ಟೊಂದು ಬೆಲೆ ಕೊಟ್ಟಿದ್ದಾರೆ, ಇಷ್ಟೊಂದು ಗೌರವ ಕೊಟ್ಟಿದ್ದಾರೆ, ನಂಬಿದ್ದಾರೆ, ಹೀಗಿರುವಾಗ ನಿಮ್ಮ ಮಾತಿನ ಬಗ್ಗೆ ನಿಮಗೆ ಬೆಲೆ ಇಲ್ಲವೆ? ನಿಮ್ಮ ಮಾತನ್ನು ನೀವೇ ನಂಬೋದಿಲ್ಲವೇ” ಎಂದು ಪ್ರಶ್ನಿಸಿದರು.  

“ನಾನು ಅವರು-ಇವರು ಎನ್ನದೆ ಎಲ್ಲರನ್ನು ನನ್ನ ಬಂಧುಗಳೆಂದು ಭಾವಿಸುವುದರಿಂದ ಒಂದು ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿ ತೋಡಿರುವ ಖೆಡ್ಡಕ್ಕೆ ಬೀಳಬೇಡಿ, ಬಲೆಗೆ ಸಿಲುಕಬೇಡಿ. ಮುಖ ನೋಡಬೇಡಿ, ನಡೆ ನೋಡಿ. ಬಲೆಗೆ ಬಿದ್ದು ಮತ ನೀಡಿದರೆ ನಿಮ್ಮ ಬದುಕು ಇನ್ನಷ್ಟು ನರಕವಾಗುತ್ತದೆ. ಪೆಟ್ರೊಲ್‌, ಗ್ಯಾಸ್‌, ಕಾಳು, ಎಣ್ಣೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈಗಾಲೇ ಮಹಿಳೆಯರು ಬಲೆ ಏರಿಕೆ ಬವಣೆಯಿಂದ ಶಾಪ ಹಾಕುತ್ತಿದ್ದಾರೆ” ಎಂದು ಕ್ಷೇತ್ರದ ಜನರಿಗೆ ಸಲಹೆ ನೀಡಿದರು.

“ಇರಲಿ, ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂಬ ಮೋದಿಯವರ ಮಾತನ್ನು ನಂಬಿ ಮತ ಕೊಟ್ಟು ಗೆಲ್ಲಿಸಿ ಇದ್ದಬದ್ದ ಉದ್ಯೋಗವನ್ನು ಕಳೆದುಕೊಂಡಿದ್ದೀವಿ. ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆ, ಅತೀಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ಕೊಡದೆ ಅವು ಕೋಟಿ ಸಂಖ್ಯೆಯಲ್ಲಿ ಮುಚ್ಚಿ ಹೋಗಿವೆ. ಆದರೆ, ಇನ್ನೊಂದು ಕಡೆ ಮೋದಿ ಅವರ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಬಂಡವಾಳಶಾಹಿಗಳ ಸಂಪತ್ತು ದ್ವಿಗುಣ ಆಗಿದೆ. ಇದುವರೆಗೂ ಉಳ್ಳವರ ಸಂಪತ್ತು ಡಬಲ್‌ ಆಗುತ್ತಿದೆ ಬಡವರ ಸಂಖ್ಯೆ ಹೆಚ್ಚುತ್ತಿದೆಯಲ್ಲ? ಮಧ್ಯಮ ವರ್ಗ ಬಡತನ ರೇಖೆ ಕಡೆ ಚಲಿಸುತ್ತಿದೆಯಲ್ಲ” ಎಂದು ಪ್ರಶ್ನಿಸಿದರು.

ವರುಣಾ

“ಇಂದಿನ ರಾಜಕಾರಣದ ಒಳಹೊಕ್ಕು ನೋಡುವುದಾದರೆ ಬಿಜೆಪಿಯಲ್ಲಿದ್ದ ಬೃಹತ್‌ ವೃಕ್ಷ ಯಡಿಯೂರಪ್ಪ ಎಂಬ ಮರಕ್ಕೆ ವಿಷದ ಇಂಜಕ್ಷನ್‌ ಚುಚ್ಚಿ ಅದು ತಾನೆ ಒಣಗುವಂತೆ ಮಾಡಲಾಗಿದೆ. ಇನ್ನೆರಡು ಬಲಿಷ್ಠ ವೃಕ್ಷಗಳಾದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿಯನ್ನು ಬುಡಸಮೇತ ಕತ್ತರಿಸಿ ಎಸೆಯಲಾಗಿದೆ. ಇನ್ನೊಂದು ಸ್ವಲ್ಪ ಗಟ್ಟಿ ಮರ ಅನ್ನಬಹುದಾದ ಸೋಮಣ್ಣನವರಿಗೆ ಫನಿಷ್‌ಮೆಂಟ್‌ ಟ್ರಾನ್ಸ್‌ಫರ್‌ ಮಾಡಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಲಾಗಿದೆ. ಮುಂದೆ ತುಂಬಾ ಚೆನ್ನಾಗಿ ಬೆಳೆದುಬಿಡುತ್ತಾರೆ ಎಂಬ ಭರವಸೆ ಹಿಡಿಸಿ ಎಳೆಕರುವನ್ನು ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ” ಎಂದು ಮಾರ್ಮಿಕವಾಗಿ ನುಡಿದರು.

“ಮೇಲೆ ಉಲ್ಲೇಖಿಸಿದ ವ್ಯಕ್ತಿಗಳ ಬಗ್ಗೆ ಆಕ್ಷೇಪಣೆಗಳು ಏನೇ ಇರಲಿ. ಏನಿದರ ಮರ್ಮ? ನನಗೆ ಅನಿಸುವುದು ಇಷ್ಟೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಜನನಾಯಕರು, ಸಮುದಾಯದ ನಾಯಕರು ಬೇಕಾಗಿಲ್ಲ. ಅವರಿಗೆ ಛಲವಾದಿ ನಾರಾಯಣಸ್ವಾಮಿ ರೀತಿಯ ಕಾಲಾಳುಗಳು ಮಾತ್ರ ಬೇಕು” ಎಂದು ಕುಟುಕಿದರು.

“ಈಗ ಲಿಂಗಾಯತ ಆಯಿತು, ಮುಂದೆ ಒಕ್ಕಲಿಗ ನಾಯಕರಿಗೆ ಸರದಿ ಕಾದಿದೆ. ರಾಜ್ಯದಲ್ಲಿ ಪ್ರಲ್ಹಾದ್‌ ಜೋಶಿ, ಸಂತೋಷ್‌ ಮತ್ತೊಬ್ಬರಿಗಷ್ಟೇ ಅವಕಾಶ. ಇದು ಬಿಜೆಪಿಯ ಗರ್ಭಗುಡಿ ಆರ್‌ಎಸ್‌ಎಸ್‌ನ ಫರ್ಮಾನ್‌. ಇದು ಎಲ್ಲಿಗೆ ಕೆರೆದುಕೊಂಡು ಹೋಗುತ್ತದೆ ಎಂದರೆ, ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮತ್ತು ಇಟಲಿಯ ಮುಸಲೋನಿಯ ಮಿಶ್ರ ಆಳ್ವಿಕೆ ಕಡೆಗೆ ಕೊಂಡೊಯ್ಯುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

“ಬಿಜೆಪಿ ಕಾಲಾಳು ಪಕ್ಷ ಮಾಡುತ್ತಿರುವುದು ಯಾಕೆಂದರೆ ಅದು ಸಂವಿಧಾನವನ್ನು ಬದಲಾಯಿಸಬೇಕು. ಚಾತುರ್ವರ್ಣದ ಮನುಧರ್ಮಶಾಸ್ತ್ರವನ್ನು ಭಾರತದ ಸಂವಿಧಾನವನ್ನಾಗಿಸಬೇಕು. ಇದು ಅವರ ಹಿಂದೂ ರಾಷ್ಟ್ರ ಎನ್ನುವುದು ಆರ್‌ಎಸ್‌ಎಸ್‌ ಗರ್ಭಗುಡಿಯ ಕಟ್ಟಪ್ಪಣೆ” ಎಂದರು.

“ಕೊನೆಯದಾಗಿ ಒಂದು ಮಾತು, ಇಡೀ ವರುಣಾ ಕ್ಷೇತ್ರ ತುಂಬಾ ಎಚ್ಚರಿಕೆಯಿಂದ ಇರಬೇಕು. ಒಳಗೆ ಕಲ್ಲಿಟ್ಟು ಅದರ ಸುತ್ತ ಹೂವು ಸುತ್ತಿ ಡಾ. ಜಿ ಪರಮೇಶ್ವರ್‌ ಅವರ ತಲೆಗೆ ಎಸೆದು ರಕ್ತ ಬರಿಸಿದ್ದಾರೆ. ಇಲ್ಲೂ ಆಗಬಹುದು. ಹೂವು ಸುತ್ತಿ ಕಲ್ಲು ಎಸೆಯುವುದು ಸಂಘ ಪರಿವಾರದ ರಾಜಕಾರಣದ ವೈಖರಿ” ಎಂದು ಎಚ್ಚರಿಕೆ ನೀಡಿದರು.

“ನೆನಪಿಡಿ ರಾಜ್ಯದ ಬಿಜೆಪಿಯ ನಾಯಕರೊಬ್ಬರು ಕ್ಷೇತ್ರದಲ್ಲಿ ಒಂದು ಹೆಣ ಬೀಳಿಸಿದರೆ ಎರಡು ಕ್ಷೇತ್ರ ಗೆದ್ದಂತೆ ಎಂದು ಹೇಳಿದ್ದು ಸುದ್ದಿಯಾಗಿತ್ತು. ಪ್ರಿಯಾಂಕ್‌ ಖರ್ಗೆ ವಿರುದ್ಧ ರೌಡಿಶೀಟರ್‌, ಗಡಿಪಾರು ಆಗಿದ್ದ ವ್ಯಕ್ತಿಯನ್ನು ಬಿಜೆಪಿ ನಿಲ್ಲಿಸಿದೆ. ಇಂತಹ ಭೂಗತ ರಾಜಕಾರಣ ಇಂದು ನಡೆಯುತ್ತಿದೆ. ದಯವಿಟ್ಟು ಎಚ್ಚರವಿರಿ. ಈ ರಿತಿ ಹೊಡಿಬಡಿ ರಕ್ತಪಾತದ ರಾಜಕಾರಣ ಆಗದಂತೆ ಎಚ್ಚರ ವಹಿಸುವುದು ನಮ್ಮ ಪೊಲೀಸ್‌ ಕರ್ತವ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...