ದೇವರ ಹಿಪ್ಪರಗಿ | ವಿದ್ಯುತ್‌ ಅವಘಡ; 2 ಎಕರೆ ಕಬ್ಬು ಬೆಂಕಿಗಾಹುತಿ

Date:

ಮೂರು ಎಕರೆಯಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಕಬ್ಬು ವಿದ್ಯುತ್‌ ಅವಘಡದಿಂದ ಬೆಂಕಿ ತಗುಲಿ ಭಾಗಶಃ ಹಾನಿಗೀಡಾಗಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ವಂದಲ ಗ್ರಾಮದ ಮಡಿವಾಳಪ್ಪ ಹಂದಿಗನೂರ ಕುಟುಂಬಕ್ಕೆ ಸೇರಿದ ಸುಮಾರು 2 ಎಕರೆ ಕಬ್ಬು ಬೆಂಕಿಗಾಹುತಿಯಾಗಿದೆ. ಸದ್ಯ ನಷ್ಟದಲ್ಲಿರುವ ರೈತ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಬೆಂಕಿ ತಗಲಿದ ಸುದ್ದಿ ತಿಳಿದ ಸುತ್ತಮುತ್ತಲಿನ ಜಮೀನುಗಳ ರೈತರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ತಾಳಿಕೋಟಿ ಪಟ್ಟಣದಿಂದ ಅಗ್ನಿಶಾಮಕದಳದ ಸಿಬ್ಬಂದಿ ಬಂದು, ಬೆಂಕಿ ನಂದಿಸಿ ಉಳಿದ ಕಬ್ಬನ್ನು ಉಳಿಸಿದ್ದಾರೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಟಾವಿಗೆ ಬಂದಿದ್ದ ಕಬ್ಬನ್ನು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ರೈತರ ವರ್ಷದ ಆದಾಯಕ್ಕೂ ಕೊಳ್ಳಿ ಇಟ್ಟಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸೂಸೈಡ್ ಪಾಯಿಂಟ್ ಆಗುತ್ತಿದೆಯಾ ‘ನಮ್ಮ ಮೆಟ್ರೋ’?

ದೇವರಹಿಪ್ಪರಗಿ ತಾಲೂಕಿನಾದ್ಯಂತ ಕಳೆದ ಮೂರು ವರ್ಷದಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ ಸುಟ್ಟು ಹೋಗುವ ಪ್ರಕರಣಗಳು ನಡೆಯುತ್ತಲೇ ಇವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ತಕ್ಷಣವೇ ಪಟ್ಟಣದಲ್ಲಿ ಅಗ್ನಿಶಾಮಕ ದಳದ ಕಚೇರಿ ಆರಂಭಿಸಬೇಕು. ಜೊತೆಗೆ ರೈತರಿಗೆ ಆದ ನಷ್ಟವನ್ನು ತುಂಬಿಕೊಡಬೇಕು ಎಂದು ತಾಲೂಕಿನ ಕಬ್ಬು ಬೆಳೆಗಾರ ವಿಠಲ ಯಂಕಂಚಿ, ಮಹಾದೇವಪ್ಪ ಗೌಡ ಬಿರಾದಾರ (ಬೊಮ್ಮನ ಜೋಗಿ), ಮಹಾಂತೇಶ ಹಿರ್ಲಾಕೊಂಡ (ಮಣೊರ), ಆನಂದ ಪರದೇಶಿಮಠ, ನಾಗೇಂದ್ರ ಹಿಂಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...