ದೇವರ ಹಿಪ್ಪರಗಿ | ಕಾರ್ಮಿಕರು ಸಮಾಜದ ನಿಜವಾದ ನಿರ್ಮಾತೃಗಳು: ಫಾ. ಸಂತೋಷ

Date:

ಪ್ರತಿಯೊಂದು ಕುಟುಂಬ ಇಂದು ಪುಟ್ಟ ಮನೆಗಳಿಂದ ಹಿಡಿದು ದೊಡ್ಡ ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಿದೆ. ಪ್ರತಿ ಸೂರಿನ ಹಿಂದೆ ಕಟ್ಟಡ ಕಾರ್ಮಿಕರ ಶ್ರಮ ಸಾಕಷ್ಟಿದೆ. ಒಂದರ್ಥದಲ್ಲಿ ಕಟ್ಟಡ ಕಾರ್ಮಿಕರೇ ಸಮಾಜದ ನಿಜಮಾದ ನಿರ್ಮಾತೃಗಳು ಎಂದು ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಫಾ. ಸಂತೋಷ ಅಭಿಪ್ರಾಯಪಟ್ಟರು.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಸಂಗಮ ಸಂಸ್ಥೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಂಯೋಗದಲ್ಲಿ ಆಯೋಜಿಸಿದ್ದ ʼಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರʼದಲ್ಲಿ ಅವರು ಮಾತನಾಡಿದರು.

“ಮಾಲಿಕರು ದುಡ್ಡು ಕೊಡುತ್ತಾರೆ, ಆದರೆ ಶ್ರದ್ದೆಯಿಂದ ಸಂಪೂರ್ಣ ಜವಾಬ್ದಾರಿಯಿಂದ ಮನೆ, ಶಾಲೆ, ಆಸ್ಪತ್ರೆಗಳು, ಇತರೆ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವುದು ಈ ಶ್ರಮ ಜೀವಿಗಳು. ಇವರು ತಮಗೆ ರೋಗ-ರುಜಿನ ಬಂದರೆ ಮಾತ್ರೆ ತೆಗೆದುಕೊಂಡು ಸುಮ್ಮನಾಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೆಜ್ಜೆ ಇಡುವುದಿಲ್ಲ. ಇದರಿಂದ ಅವರು ಮಾರಣಾಂತಿಕ ರೋಗಗಳಿಗೆ ತುತ್ತಾಗುವ ಸಂಭವ ಹೆಚ್ಚು. ಈ ಶ್ರಮಜೀವಿಗಳಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತೀ ಅವಶ್ಯಕ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂದಗಿ ತಾಲೂಕು ಆಸ್ಪತ್ರೆಯ ಸ್ಟಾಫ್ ನರ್ಸ ರಫಿಕ್ ಮುಲ್ಲಾ ಮಾತನಾಡಿ, “ನಾಗರಿಕರು ಸಾಮಾನ್ಯವಾಗಿ ನಿರ್ಲಕ್ಷಿಸುವ ರಕ್ತದೊತ್ತಡ ಹಾಗೂ ಮಧುಮೇಹದಂತ ಕಾಯಿಲೆಗಳನ್ನು ಪ್ರಾರಂಭದಲ್ಲಿ ಕಂಡು ಹಿಡಿಯಲು ಇಂಥಹ ಶಿಬಿರಗಳು ಬಹಳ ಉಪಯುಕ್ತವಾಗಿವೆ” ಎಂದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಸಿಂದಗಿ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ರೋಗದ ಆಪ್ತ ಸಮಾಲೋಚಕಿ ರುಬಿನಾ ನಧಾಫ್ ಮಾತನಾಡಿ, “ಮಾನಸಿಕ ಆರೋಗ್ಯವೆಂದರೆ ವ್ಯಕ್ತಿಯ ಭಾವನೆ, ಚಿಂತನೆ ಮತ್ತು ವರ್ತನೆ ಸರಿಯಾಗಿ ಕಾರ್ಯನಿರ್ವಹಿಸುವ ಸ್ಥಿತಿ. ಇದು ದೈಹಿಕ ಆರೋಗ್ಯದಷ್ಟೇ ಮಹತ್ವದ್ದಾಗಿದೆ. ಒತ್ತಡ, ಆತಂಕ, ದುಃಖ, ಭಯ, ಮತ್ತು ಸಾಮಾಜಿಕ ಒತ್ತಡಗಳು ಮಾನಸಿಕ ಆರೋಗ್ಯವನ್ನು ಹಾನಿ ಮಾಡಬಹುದು. ಸರಿಯಾದ ವಿಶ್ರಾಂತಿ, ಸಮತೋಲಿತ ಆಹಾರ, ವ್ಯಾಯಾಮ, ಸಮಾಲೋಚನೆ, ಮತ್ತು ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುವ ಅಭ್ಯಾಸಗಳು ಮನಸ್ಸಿಗೆ ಶಾಂತಿ ತರುತ್ತವೆ. ಮಾನಸಿಕ ಸಮಸ್ಯೆಗಳು ಬಂದಾಗ ಅವನ್ನು ಮರೆಮಾಚಿ ಇರಿಸುವುದಕ್ಕಿಂತ ಸಹಾಯ ಕೇಳುವುದು, ತಜ್ಞರ ಸಲಹೆ ಪಡೆಯುವುದು ಮತ್ತು ಜೀವನಶೈಲಿ ಸುಧಾರಿಸುವುದು ಅತ್ಯಂತ ಮುಖ್ಯ. ಮಾನಸಿಕ ಆರೋಗ್ಯ ಉತ್ತಮವಾಗಿದ್ದಾಗ ವ್ಯಕ್ತಿ ಸಂತೋಷದಿಂದ, ಆತ್ಮವಿಶ್ವಾಸದಿಂದ ಜೀವನದ ಸವಾಲುಗಳನ್ನು ಎದುರಿಸಬಲ್ಲನು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಪ್ರಕಾಶ ನಾಯಕ್, ಡಿಇಒ ಲಕ್ಷ್ಮೀ ತಳವಾಡ, ಗ್ರಾಮಸ್ಥರು, ಕಟ್ಟಡ ಕಾರ್ಮಿಕರು, ಮಹಿಳಾ ಸಂಘದ ಸದಸ್ಯರು, ಬಸವರಾಜ ಬಿಸನಾಳ, ವಿಜಯ ಬಂಟನೂರ ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...