ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಘಟನೆ ದೇವದುರ್ಗ ತಾಲ್ಲೂಕು ಕರಿಗುಡ್ಡ ಬಳಿ ನಡೆದಿದೆ.
ತಾಲ್ಲೂಕಿನ ಕರಿಗುಡ್ಡ ಗ್ರಾಮದ ಮಲ್ಲಯ್ಯ (47) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ದೇವದುರ್ಗ ಕಡೆಗೆ ಹೊರಟಿದ್ದ ಸಾರಿಗೆ ಬಸ್ ಹಿಂಬದಿಯಿಂದ ಆಟೋಗೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಆಟೋದಲ್ಲಿ ಸುಮಾರು 15 ಪ್ರಯಾಣಿಸುತ್ತಿದ್ದರು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 3 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸ್ಥಳೀಯರ ಮುಖಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಾನ್ವಿ | ಲಾರಿ – ಬೈಕ್ ನಡುವೆ ಅಪಘಾತ; ಓರ್ವ ಸಾವು
ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.





