ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ವಕೀಲ ಹನುಮಂತರಾಯ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಸುಮಾರು 60 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದಲ್ಲಿ 60 ಜನರ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಶಾಸಕಿ ಕರೆಮ್ಮ ಹಾಗೂ ಪಕ್ಷದ ಕಾರ್ಯಕರ್ತರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನಲ್ಲಿ ಶ್ರೀನಿವಾಸ ನಾಯಕ, ರವಿ ಪ್ರಕಾಶ ಅಕ್ಕರಕಿ, ಸುರೇಶ ನಾಯಕ, ಚಿಂತಲಕುಂಟ ವೀರೇಶಗೌಡ, ಯಾಟಗಲ್ ಹನುಮಂತ್ರಾಯ, ಕರಿಗುಡ್ಡ ಅಮರೇಶ, ಅಂಜಳ ಸೇರಿದಂತೆ ಒಟ್ಟು 60 ಮಂದಿ ಮೇಲೆ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ದೇವದುರ್ಗ | ಅಕ್ರಮ ಮರಳು ಮಾಫಿಯಾದಿಂದ ಜೀವ ಬೆದರಿಕೆ; ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಆರೋಪ
ಘಟನೆಗೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.





