ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದ್ದು, ಇದರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಮುಂದಾದಾಗ ಶಾಸಕಿ ಕರೆಮ್ಮ ನಾಯಕ ಅವರ ಬೆಂಬಲಿಗರಿಂದ ಜೀವ ಬೆದರಿಕೆ ಕರೆಗಳು ಹಾಗೂ ಸಂದೇಶಗಳು ಬರುತ್ತಿವೆ ಎಂದು ಭೀಮ್ ಆರ್ಮಿಯ ದೇವದುರ್ಗ ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದೇವ ಗಂಭೀರ ಆರೋಪ ಮಾಡಿದ್ದಾರೆ.
ಅವರಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,2023-24ನೇ ಸಾಲಿನ ಕಾಮಗಾರಿಗಳನ್ನು ಇನ್ನೂ ಪೂರ್ಣಗೊಳಿಸುತ್ತಿಲ್ಲ. ಕೆಲವು ಕಾಮಗಾರಿಗಳು ಪೂರ್ಣಗೊಂಡರೂ ಕಳಪೆ ಮಟ್ಟದ್ದಾಗಿದೆ. ಈಗಲೂ ದೇವದುರ್ಗ ತಾಲೂಕಿನ ಅನೇಕ ಗ್ರಾಮಗಳಲ್ಲಿ ಶೌಚಾಲಯಗಳಿಲ್ಲದೇ ಮಹಿಳೆಯರು ಪರದಾಡುವಂತ ಸ್ಥಿತಿ ಇದೆ. ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಈ ರೀತಿಯ ಅಭಿವೃದ್ಧಿ ವಿಚಾರದ ಬಗ್ಗೆ ಪ್ರಶ್ನೆ ಮಾಡಿದರೆ ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದರು.
ಈಗಾಗಲೇ ಬೆದರಿಕೆ ಕರೆಗಳ ಕುರಿತು ಎಸ್‍ಪಿ, ಡಿಜಿಪಿ ಹಾಗೂ ಸಭಾಧ್ಯಕ್ಷರಿಗೆ ದೂರು ನೀಡಲಾಗಿದೆ. ಭರವಸೆಗಳನ್ನು ಈಡೇರಿಸುವವರೆಗೂ ಹೋರಾಟ ನಡೆಸುವುದಾಗಿ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮಾನ್ವಿ | ಗಿಡಗಂಟಿಗಳ ಕಾಡಾಗಿ ಬದಲಾದ ಕುರ್ಡಿ ಶಾಲಾ ಆವರಣ; ಪೋಷಕರ ಆಕ್ರೋಶ
ಈ ಸಂದರ್ಭದಲ್ಲಿ ಪ್ರಮುಖರಾದ ದೀಪಕ್ ಭಂಡಾರಿ, ಬಾಬಾಖಾನ್, ಎಚ್‍ಎಂ ಬಾಬು ಉಪಸ್ಥಿತರಿದ್ದರು.





