ಬೀದರ್‌ | ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

Date:

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಳ, ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹17 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಪಿಡಿಒ

ಪ್ರತಿಭಟನೆಯಲ್ಲಿ ಸಿಐಟಿಯು ಬೀದರ್ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶ್ರೀ, ಕಾರ್ಯಧ್ಯಕ್ಷೆ ಶ್ರೀದೇವಿ ಚುಡೇ, ಖಜಾಂಚಿ ಮಹಾದೇವಮ್ಮ, ಪದ್ಮಾವತಿ ಸ್ವಾಮಿ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...