ಧರ್ಮಸ್ಥಳ ಪ್ರಕರಣ | SIT ಕೈಗೆ FSL ವರದಿ? ಹೊರಬಂದ ಮಾಹಿತಿಗಳೇನು?

Date:

ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾಗಿರುವ ಸರಣಿ ನಾಪತ್ತೆ, ಕೊಲೆ ಹಾಗೂ ರಹಸ್ಯವಾಗಿ ಹೂತು ಹಾಕಿರುವ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದ ಅವಶೇಷಗಳನ್ನು ಪರೀಕ್ಷಿಸಿದ್ದ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು ಎಸ್‌ಐಟಿ ಕೈ ಸೇರಿದೆ ಎಂದು ತಿಳಿದುಬಂದಿದೆ.

ಧರ್ಮಸ್ಥಳದ ಸ್ನಾನಘಟ್ಟದ ಸಮೀಪ ಮತ್ತು ಬಂಗ್ಲೆಗುಡ್ಡೆ ಕಾಡಿನಲ್ಲಿ ಮೃತದೇಹಗಳ ಅವಶೇಷಗಳನ್ನು ಹೊರತೆಗೆದಿದ್ದ ಎಸ್‌ಐಟಿ, ಅವುಗಳನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಿತ್ತು. ಇದೀಗ, ಎಫ್‌ಎಸ್‌ಎಲ್‌ ವರದಿಯನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ. ದೊರೆತಿರುವ ಅವಶೇಷಗಳು ಪುರುಷರದ್ದು ಎಂದು ವರದಿ ತಿಳಿಸಿರುವುದಾಗಿ ವರದಿಯಾಗಿದೆ.

“ದೊರೆತಿದ್ದ ಅವಶೇಷಗಳ ಭೌತಿಕ ಲಕ್ಷಣಗಳು ಮತ್ತು ಅವುಗಳು ಪತ್ತೆಯಾದಾಗ ಇದ್ದ ಸ್ಥಿತಿಯ ಆಧಾರದಲ್ಲಿ ಅವುಗಳು ಪುರುಷರದ್ದು ಎಂಬುದು ಸ್ಪಷ್ಟವಾಗಿದೆ. ಆದರೆ ಈ ಅಂಶವು ವಂಶವಾಹಿ ಪರೀಕ್ಷೆಯನ್ನು ಆಧರಿಸಿಲ್ಲ. ಮೇಲಾಗಿ ಮೃತದೇಹಗಳ ಮೂಳೆಗಳಿಗೆ ಸಂಬಂಧಿಸಿದಂತೆ ಕುಟುಂಬದ ಯಾವುದೇ ಸದಸ್ಯರ ಡಿಎನ್ಎ ಮಾದರಿಗಳು ಲಭ್ಯವಿಲ್ಲ.ಆದ್ದರಿಂದ, ಅದು ಯಾರ ಮೃತದೇಹ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ” ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ಮೂರ್ನಾಲ್ಕು ತಿಂಗಳ ಹಿಂದೆ, ಪೊಲೀಸರ ಎದುರು ಬಂದಿದ್ದ ಚಿನ್ನಯ್ಯ, “ಧರ್ಮಸ್ಥಳದಲ್ಲಿ ನಾನೇ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ. ಅಪರಾಧ ಕೃತ್ಯಗಳನ್ನು ಎಸಗಿ, ಶವಗಳನ್ನು ನನ್ನಿಂದ ಬಲವಂತವಾಗಿ ಹೂತುಹಾಕಿಸಲಾಗಿದೆ” ಎಂದು ದೂರಿದ್ದರು. ಅವರ ದೂರಿನ ಆಧಾರದ ಮೇಲೆ ಧರ್ಮಸ್ಥಳದಲ್ಲಿನ ಸರಣಿ ಸಾವುಗಳು ಮತ್ತು ರಹಸ್ಯ ಹೂತುಹಾಕಿದ ಪ್ರಕರಣದ ತನಿಖೆಗಾಗಿ ಸರ್ಕಾರವು ಎಸ್‌ಐಟಿ ರಚನೆ ಮಾಡಿತ್ತು. ಎಸ್‌ಐಟಿ ತಂಡವು ಚಿನ್ನಯ್ಯ ತೋರಿಸಿದ್ದ ಸ್ಥಳಗಳಲ್ಲಿ ಉತ್ಖನನ ನಡೆಸಿತ್ತು. ಗುರುತಿಸಲಾಗಿದ್ದ 6 ಮತ್ತು 11ಎ ಸ್ಥಳದಲ್ಲಿ ಮೃತದೇಹಗಳ ಅವಶೇಷಗಳು ಪತ್ತೆಯಾಗಿದ್ದವು.

ಇನ್ನು, ಇದೇ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೌಜನ್ಯ ಪ್ರಕರಣದ ಹೊರಾಟದ ನೇತೃತ್ವವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ. ಹಾಗೂ ವಿಠಲ್ ಗೌಡ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿತ್ತು. ಅಕ್ಟೋಬರ್ 27ರಂದು ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಅಂದೇ, ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ವಿಚಾರಣೆಯನ್ನು ತಪ್ಪಿಸಿದ್ದಾರೆ ಎಂದು ಹೇಳಲಾಗಿದೆ. ಇದೀಗ, ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್‌ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...