ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

Date:

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಶನಿವಾರ ಸಂಜೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು.

ಜಾಮೀನು ಮಂಜೂರಾದ ಬೆನ್ನಲ್ಲೇ ಹಿರಿಯಡ್ಕ ಜೈಲಿನಿಂದ ಮಹೇಶ್ ಶೆಟ್ಟಿ ತಿಮರೋಡಿಯವರು ತಮ್ಮ ಊರಾದ ಉಜಿರೆಗೆ ಬಂದಿದ್ದು ಈ ವೇಳೆ ಉಜಿರೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹೂಮಾಲೆ ಹಾಕಿ, ಪಟಾಕಿ ಸಿಡಿಸಿ, ಸಂಭ್ರಮಿಸಿದರು.

ಇದನ್ನು ಓದಿದ್ದೀರಾ? ಬಿ.ಎಲ್ ಸಂತೋಷ್‌ಗೆ ಅವಹೇಳನ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಉಜಿರೆಯಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, “ಧರ್ಮಸ್ಥಳ ಗ್ರಾಮದಲ್ಲಿ ಆಗಿರುವ ಹಲವಾರು ಅತ್ಯಾಚಾರಗಳ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಎರಡು ದಿನ ಬಂಧಿಸಿ‌ ಜೈಲಿನಲ್ಲಿಡಲಾಗಿತ್ತು. ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ. ಎಸ್‌ಐಟಿ ತನಿಖೆ ನಿಲ್ಲಿಸುವುದಕ್ಕೆ ಮಾಡಿರುವ ಷಡ್ಯಂತ್ರ” ಎಂದು ಹೇಳಿದ್ದಾರೆ.

“ಕಳೆದೆರಡು ದಿವಸಗಳಿಂದ ನಡೆದ ಘಟನೆ ಇಡೀ ರಾಜ್ಯ, ರಾಷ್ಟ್ರ ತಲೆತಗ್ಗಿಸುವಂತದ್ದು. ಯಾವುದೇ ಅಪರಾಧವನ್ನು ಮಾಡದೆಯೇ ಕೆಲವು ಷಡ್ಯಂತ್ರ, ಪಿತೂರಿಗಳಿಂದ ನಮ್ಮನ್ನು ಎರಡು ದಿವಸ ಜೈಲಿನಲ್ಲಿ ಇಡಲಾಯಿತು. ಶ್ರೀ ಕೃಷ್ಣ ಪರಮಾತ್ಮ ಹುಟ್ಟಿದ್ದು ಜೈಲಲ್ಲಿ. ಅಲ್ಲಿಗೆ ಹೋಗಿ ಬಂದದ್ದು ನಮಗೇನೂ ನೋವು ಅನಿಸಿಲ್ಲ. ಯಾಕಂದ್ರೆ ಇವತ್ತು ಶ್ರೀ ಕೃಷ್ಣ ಪರಮಾತ್ಮ ಹೊರಗೆ ಬಂದಾಗಿದೆ. ಮುಂದಿನ ದಿನಗಳಲ್ಲಿ ದುಷ್ಟರ ಸಂಹಾರ ಖಂಡಿತ ನಡೆಯುತ್ತದೆ” ಎಂದರು.

“ನಾವು ಇಷ್ಟರವರೆಗೂ ಯಾವುದೇ ಸಮಾಜ, ವ್ಯಕ್ತಿಗಳು, ಧರ್ಮದ ವಿರುದ್ಧ ನಾವು ಮಾತನಾಡಿದವರಲ್ಲ. ಬರೀ ಧರ್ಮಸ್ಥಳ ಗ್ರಾಮದಲ್ಲಿ ನಡೆದಂತಹ ಅತ್ಯಾಚಾರಿಗಳ ದಮನ ಆಗಬೇಕು, ಅತ್ಯಾಚಾರಿಗಳು ಯಾರು ಎಂಬುದು ತಿಳಿಯಬೇಕು ಎಂಬ ದೃಷ್ಟಿಯಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇವತ್ತು ರಾಜಕೀಯದವರು ಅತ್ಯಾಚಾರಿಗಳ ಕೈಯಾಳುಗಳಾಗಿದ್ದಾರೆ” ಎಂದು ದೂರಿದರು.

“ಕೆಲವೇ ಕೆಲವು ರಾಜಕೀಯ ವ್ಯಕ್ತಿಗಳ ಪಿತೂರಿಯಿಂದ ಆದಂತಹ ಒಂದು ದಿನದ ನಾಟಕ, ಬಂಧನದ ಯಾತ್ರೆ ಇಲ್ಲಿಗೆ ಮುಕ್ತಾಯವಾಗಿದೆ. ಸದ್ಯ ಈ ವಿಚಾರವನ್ನು ಎಲ್ಲೆಲ್ಲೋ ಕೊಂಡೊಯ್ಯಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ನಿಲ್ಲಿಸಲೆಂದೇ ಈ ಷಡ್ಯಂತ್ರ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

“ಅತ್ಯಾಚಾರಿಗಳ ಪರವಾಗಿ ಇರುವವರು ಏನೇ ಹೇಳಿದರೂ ನಾವು ತಾಳ್ಮೆಯಿಂದ ಇರಬೇಕು. ನ್ಯಾಯ ಸಿಗುವವರೆಗೂ ನಾವು ಸುಮ್ಮನಿರಬೇಕು. ಶೀಘ್ರವೇ ಧರ್ಮಸ್ಥಳ ಪ್ರಕರಣದ ಬಗ್ಗೆ ಒಳ್ಳೆಯ ರೀತಿ ತೀರ್ಮಾನ ಬಂದೇ ಬರುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...