ಧರ್ಮಸ್ಥಳ ಪ್ರಕರಣ | SIT ರಚನೆಯಲ್ಲಿ ರಾಹುಲ್‌ ಗಾಂಧಿ ಮಧ್ಯಪ್ರವೇಶಿಸುವಂತೆ ಸಾಮಾಜಿಕ ಕಾರ್ಯಕರ್ತೆ ಒತ್ತಾಯ

Date:

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಸಲುವಾಗಿ ತಾವು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ ನಾಗಮಣಿಯವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರಿಗೆ ತುರ್ತು ಮನವಿ ಸಲ್ಲಿಸಿದ್ದಾರೆ.

“ಧರ್ಮಸ್ಥಳ ಪ್ರಕರಣವು ಎರಡು ದಶಕಗಳಿಂದ ನಡೆದಿರುವ ಕ್ರೂರ ಅತ್ಯಾಚಾರ, ಕೊಲೆ ಮತ್ತು ಸಾಮೂಹಿಕ ಶವ ಸಂಸ್ಕಾರ ಮಾಡಿರುವ ಆರೋಪಗಳನ್ನು ಎದುರಿಸುತ್ತಿದ್ದು, ಇದು ದೇಶದ ಆತ್ಮಸಾಕ್ಷಿಗೆ ಗಂಭೀರ ಕಳಂಕವಾಗಿದೆ” ಎಂದು ಒತ್ತಿ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1995ರಿಂದ 2014ರವರೆಗೆ ಧರ್ಮಸ್ಥಳದ ಮಂಜುನಾಥ ದೇವಸ್ಥಾನದಲ್ಲಿ ಶುಚಿಕರ್ಮಿಯಾಗಿದ್ದ ದಲಿತ ವ್ಯಕ್ತಿಯೊಬ್ಬರು ತಮ್ಮ ದೂರನ್ನು ದಾಖಲಿಸಿದ್ದದು. ಈ ವ್ಯಕ್ತಿಯು, ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದ ಪ್ರಭಾವಿ ವ್ಯಕ್ತಿಗಳಿಂದ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆಗೊಳಗಾದ ನೂರಾರು ಮಹಿಳೆಯರು ಹಾಗೂ ಬಾಲಕಿಯರ ಶವಗಳನ್ನು ಬಲವಂತವಾಗಿ ಸಮಾಧಿ ಮಾಡಲು ಒತ್ತಾಯಿಸಲಾಗಿತ್ತೆಂದು ಆರೋಪಿಸಿದ್ದಾರೆ. ಈ ಭೀಕರ ಕೃತ್ಯಗಳನ್ನು ಎರಡು ದಶಕಗಳಿಗೂ ಹೆಚ್ಚು ಕಾಲ ಗೌಪ್ಯವಾಗಿಡಲಾಗಿತ್ತು. 2014ರಲ್ಲಿ ಭಯದಿಂದ ಪರಾರಿಯಾಗಿದ್ದ ದೂರುದಾರರು 2025ರ ಜುಲೈ 3ರಂದು ಮರಳಿ ಬಂದು, ಸಾಕ್ಷ್ಯವಾಗಿ ಅಸ್ಥಿಪಂಜರಗಳನ್ನು ಒದಗಿಸಿದ್ದಾರೆ. ಅಲ್ಲದೆ ನೇತ್ರಾವತಿ ನದಿಯ ಸಮೀಪದ ಸಮಾಧಿ ಸ್ಥಳಗಳನ್ನು ಗುರುತಿಸಲು ಸಿದ್ಧರಿದ್ದಾರೆ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.

“ಈ ಪ್ರಕರಣದ ಗಂಭೀರತೆಯ ಹೊರತಾಗಿಯೂ, ದಕ್ಷಿಣ ಕನ್ನಡ ಪೊಲೀಸರ ತನಿಖೆಯಲ್ಲಿ ವಿಳಂಬವಾಗಿದ್ದು, ದುರ್ವರ್ತನೆಯ ಆರೋಪಗಳು ಕೇಳಿಬಂದಿವೆ. ಜುಲೈ 4ರಂದು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 211(a) ಅಡಿಯಲ್ಲಿ FIR ದಾಖಲಾದರೂ, ಶವಗಳ ಗುರುತನ್ನು ತೋರಿಸಿ ಎರಡು ವಾರಗಳಾದರೂ ಸಮಾಧಿಗಳು ದೊರೆತ ಸ್ಥಳಕ್ಕೆ ಭೇಟಿಯಾಗಿಲ್ಲ. ಇದರಿಂದ ಸಾಕ್ಷ್ಯಗಳು ನಾಶವಾಗುವ ಸಂಭವವಿದೆ” ಎಂದು ನಾಗಮಣಿ ಆತಂಕ ವ್ಯಕ್ತಪಡಿಸಿದ್ದಾರೆ.

“ದೂರುದಾರರ ಗೌಪ್ಯ ಹೇಳಿಕೆ(ಸೆಕ್ಷನ್ 183, BNSS) ಮತ್ತು ವೈಯಕ್ತಿಕ ಮಾಹಿತಿಯನ್ನು ಕೆಲವು ಪೊಲೀಸ್ ಅಧಿಕಾರಿಗಳು ಸೋರಿಕೆ ಮಾಡಿದ್ದಾರೆಂಬ ಆರೋಪವಿದೆ. ಇದು ಸಾಕ್ಷಿಗಳ ರಕ್ಷಣಾ ಯೋಜನೆ, 2018ರ ನಿಯಮಗಳ ಉಲ್ಲಂಘನೆಯಾಗಿದೆ. ಈ ಲೋಪಗಳು ತನಿಖೆಯ ಸಮಗ್ರತೆಯನ್ನು ದುರ್ಬಲಗೊಳಿಸುತ್ತಿವೆ. ಅಲ್ಲದೆ ದೂರುದಾರರ ಜೀವಕ್ಕೆ ತೊಂದರೆಯನ್ನುಂಟು ಉಂಟುಮಾಡಿವೆ” ಎಂದು ಉಲ್ಲೇಖಿಸಿದ್ದಾರೆ.

ಮೂರು ದಶಕಗಳಿಂದ ಮಹಿಳೆಯರು, ಬಡವರು, ದಲಿತರು ಮತ್ತು ಸಾಮಾಜಿಕವಾಗಿ ಶೋಷಿತರ ಹಕ್ಕುಗಳಿಗಾಗಿ ಹೋರಾಡುತ್ತಿರುವ ನಾಗಮಣಿ, “ಈ ಪ್ರಕರಣವು ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಇಂತಹ ಗಂಭೀರ ಅಪರಾಧವನ್ನು ಬೆಳಕಿಗೆ ತಂದಿದೆ. ಹಾಗಾಗಿ ತಾವು ಮಧ್ಯಪ್ರವೇಶಿಸಿ ನ್ಯಾಯ ಒದಗಿಸುವಲ್ಲಿ ಕ್ರಮಕೈಗೊಳ್ಳಬೇಕು” ಎಂದು ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

  1. ವಿಶೇಷ ತನಿಖಾ ತಂಡ (SIT): ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತ IPS ಅಧಿಕಾರಿಯ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್‌ನ ನಿವೃತ್ತ ಅಥವಾ ಕಾರ್ಯನಿರ್ವಾಹಕ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ SIT ರಚಿಸಬೇಕು.
  2. ದುರ್ವರ್ತನೆಯ ಪೊಲೀಸರ ವಿರುದ್ಧ ಕ್ರಮ: ಗೌಪ್ಯ ಮಾಹಿತಿ ಸೋರಿಕೆ ಮಾಡಿದ ಅಧಿಕಾರಿಗಳ ವಿರುದ್ಧ ಕಾನೂನು ಮತ್ತು ಶಿಸ್ತು ಕ್ರಮ ಕೈಗೊಳ್ಳಬೇಕು.
  3. ತನಿಖೆಯ ವಿಳಂಬ ತಡೆಗಟ್ಟುವಿಕೆ: ಸಾಕ್ಷ್ಯ ಉಳಿಸಲು ತಕ್ಷಣವೇ ಉತ್ಖನನ ಮತ್ತು ಸ್ಥಳ ಭೇಟಿಯನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣವು ಭಾರತದ ಸಂವಿಧಾನದ ಘನತೆ, ಸಮಾನತೆ ಮತ್ತು ನ್ಯಾಯದ ಆದರ್ಶಗಳನ್ನು ಕಾಪಾಡುವ ಪರೀಕ್ಷೆಯಾಗಿದೆ. ಸಾಮಾಜಿಕ ಕಾರ್ಯಕರ್ತೆಯಾಗಿ, ನಾಗಮಣಿಯವರು ಈ ಅಮಾನವೀಯ ಕೃತ್ಯದ ವಿರುದ್ಧ ಧ್ವನಿಯಾಗಿ, ಲೋಕಸಭೆಯಲ್ಲಿ ಈ ವಿಷಯವನ್ನು ಎತ್ತಿಹಿಡಿಯಲು ಮತ್ತು ದೂರುದಾರರಿಗೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...