ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಸುವೋ ಮೋಟೊ ಕೇಸ್‌ ದಾಖಲು

Date:


ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ನಾನೇ ಹೂತು ಹಾಕಿದ್ದೇನೆ. ಪಾಪ ಪ್ರಜ್ಞೆ ಕಾಡುತ್ತಿದೆ. ಆ ಮೃತದೇಹಗಳನ್ನು ಹೊರತೆಗೆಯುತ್ತೇನೆ ತನಿಖೆ ನಡೆಸಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬೆನ್ನಲ್ಲೇ, ಯೂಟ್ಯೂಬರ್‌ ಸಮೀರ್ ಎಂ.ಡಿ ಅವರು ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆ-ಅತ್ಯಾಚಾರಗಳ ಬಗ್ಗೆ ವಿಡಿಯೋ ಮಾಡಿ, ಅಪ್‌ಲೋಡ್‌ ಮಾಡಿದ್ದರು. ಇದೀಗ, ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸರು ಸುವೋ ಮೋಟೋ ಪ್ರಕರಣ ದಾಖಲಿಸಿದ್ದಾರೆ.

ಸಮೀರ್ ಅವರ ವಿಡಿಯೋ ಸಾರ್ವಜನಿಕರ ಪ್ರಚೋದನೆ ನೀಡುವಂತಿದೆ ಮತ್ತು ಕೆಲವು ಸುಳ್ಳು ಮಾಹಿತಿಗಳನ್ನು ಒಳಗೊಂಡಿದೆ ಎಂದು ಪೊಲೀಸರು ಆರೋಪಿಸಿದ್ದು, ಸಮೀರ್ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 192,240,353(1)(b) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವುದಾಗಿ ಹೇಳಿಕೊಂಡಿರುವ ಸಾಕ್ಷಿ-ದೂರುದಾರರು ತಮ್ಮ ದೂರು ಮತ್ತು ನ್ಯಾಯಾಲಯದ ಎದುರು ಬಹಿರಂಗಪಡಿಸಿದ ಮಾಹಿತಿಗಳನ್ನು ಹೊರತುಪಡಿಸಿ, ಹಲವಾರು ಮಾಹಿತಿಗಳನ್ನು ಕಾಲ್ಪನಿಕ ಮತ್ತು ಎ.ಐ ಮೂಲಕ ಸೃಷ್ಟಿಸಿ ಸಮೀರ್ ವಿಡಿಯೋ ಮಾಡಿದ್ದಾರೆ ಎಂದೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...