ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

Date:

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ಧರ್ಮಸ್ಥಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಧರ್ಮಸ್ಥಳ ವಿರುದ್ದ ಅಪಪ್ರಚಾರ ಅರೋಪ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ಯೂಟ್ಯೂಬ‌ರ್ ಸಮೀರ್ ಎಂ.ಡಿ.ಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆಯಿದ್ದ ಸಮೀರ್‌ಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿ, ಆದೇಶಿಸಿದೆ.

ನ್ಯಾಯವಾದಿ ಸಿರಾಜುದ್ದೀನ್ ಮೂಲಕ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಂ ಡಿ ಸಮೀ‌ರ್ ನಿರೀಕ್ಷಣಾ ಜಾಮೀನು ಕೋರಿದ್ದರು. ಸದ್ಯ ನ್ಯಾಯಾಲಯ ಜಾಮೀನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಸುತ್ತುವರಿದಿದ್ದ ಪೊಲೀಸರು

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ ಖಾಕಿ ಪಡೆ ಸುತ್ತುವರಿದಿದ್ದರು. ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿತ್ತು.

ಆ ಬಳಿಕ ಮನೆಯನ್ನು ಶೋಧಿಸಿದ್ದರು. ಈ ವೇಳೆ ಮನೆಯಲ್ಲಿದ್ದ ಸಮೀರ್‌ ತಾಯಿ ಸಕಾರಾತ್ಮಕವಾಗಿ ಸ್ಪಂದಿಸಿ ಮನೆಯೆಲ್ಲ ತೋರಿಸಿದ್ದರು.

ಇದನ್ನು ಓದಿದ್ದೀರಾ? ಬಿ.ಎಲ್ ಸಂತೋಷ್‌ಗೆ ಅವಹೇಳನ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಸಮೀರ್‌ ಮನೆ ಮುಂದೆ ಬೆಳಿಗ್ಗೆಯಿಂದಲೇ ಜಮಾಯಿಸಿದ್ದ ಪೊಲೀಸರ ಬಳಿ ಆತನ ಮನೆ ಶೋಧಿಸಲು ಸರ್ಚ್‌ ವಾರೆಂಟ್‌ ಇರಲಿಲ್ಲ. ಅಲ್ಲದೆ, ಸಮೀರ್‌ನನ್ನು ಬಂಧಿಸಲು ಅರೆಸ್ಟ್‌ ವಾರೆಂಟ್‌ ಕೂಡ ಪೊಲೀಸರ ಬಳಿ ಇರಲಿಲ್ಲ ಎಂಬುದಾಗಿ ಸಮೀರ್‌ ತಾಯಿ ಮತ್ತು ಸಮೀರ್‌ ಪರ ವಕೀಲರು ಈದಿನ.ಕಾಂಗೆ ತಿಳಿಸಿದ್ದಾರೆ.

ಈ ನಡುವೆ ಕೆಲವು ಮಾಧ್ಯಮಗಳು ಸಮೀರ್ ಎಂ.ಡಿ. ಪರಾರಿಯಾಗಿದ್ದಾರೆ ಎಂದು ಸುದ್ದಿಗಳನ್ನು ಬಿತ್ತರಿಸಿದ್ದವು. ಇದಕ್ಕೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ನವೀನ್ ಸೂರಿಂಜೆ, “ಸಮೀರ್ ಎಂಡಿ ಪರಾರಿಯಾಗಿಲ್ಲ. ವಿಚಾರಣೆಗೆ ಹಾಜರಾಗಲು ಪೊಲೀಸರಿಗೆ ಲಿಖಿತವಾಗಿ ಸಮಾಯಾವಕಾಶವನ್ನು ಸಮೀರ್ ಕೇಳಿದ್ದರು. 15 ದಿನಗಳ ಕಾಲಾವಕಾಶವನ್ನು ಪೊಲೀಸರು ನೀಡಿದ್ದರು ಕೂಡ ! ಆದರೆ ಇಂದು ಮದ್ಯಾಹ್ನ ಪೊಲೀಸರು ಸಮೀರ್ ಮನೆಗೆ ಸರ್ಚ್ ವಾರೆಂಟ್ ಇಲ್ಲದೆಯೇ ಬಂದಿದ್ದಾರೆ. ನೂರಾರು ಕೊಲೆ, ಅತ್ಯಾಚಾರ ಮಾಡಿದವರು ರಾಜಮರ್ಯಾದೆ ಅನುಭವಿಸುತ್ತಿದ್ದಾರೆ. ಸತ್ಯವನ್ನು ಜನರಿಗೆ ಹೇಳಿದವರನ್ನು ಪೊಲೀಸರು ಬೇಟೆಯಾಡುತ್ತಿದ್ದಾರೆ. ಸಮೀರ್ ಎಂಡಿ ಇಂದು ಅವರ ವಕೀಲರ ಜೊತೆ ನ್ಯಾಯಾಲಯದಲ್ಲಿದ್ದಾರೆ. ಯಾವ ಪರಾರಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...