ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

Date:

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ಸೌಜನ್ಯ ಪರ ಹೋರಾಟಗಾರರು ಪಾಂಗಳ ಕ್ರಾಸ್ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳದ ಕೆಲವರು ಪೊಲೀಸರ ಮುಂದೆಯೇ ವಾಗ್ವಾದ ನಡೆಸಿದರು. ಈ ವೇಳೆ ಎರಡು ಗುಂಪುಗಳು ಮುಖಾಮುಖಿ ವಾಗ್ವಾದ ನಡೆಸುತ್ತಿದ್ದಂತೆಯೇ ಪೊಲೀಸರು ಲಾಠಿ ಬೀಸುವ ಮೂಲಕ ಗುಂಪನ್ನು ಚದುರಿಸಲು ಯತ್ನಿಸಿದರು. ಆದರೆ, ಈ ವೇಳೆ ಕೆಲವರು ಪೊಲೀಸರನ್ನೇ ದೂಡಿದ್ದಾರೆ.

ಆ ಬಳಿಕ ಸ್ಥಳಕ್ಕೆ ಇನ್ನಷ್ಟು ಜನ ಜಮಾವಣೆಗೊಂಡಿದ್ದಲ್ಲದೇ, ಸ್ಥಳದಲ್ಲಿ ಎರಡು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ, ಸೌಜನ್ಯ ಮನೆಗೆ ದಾರಿ ಎಂದು ಹಾಕಿದ್ದ ಬೋರ್ಡಿಗೂ ಹಾನಿ ಎಸಗಿದ್ದಾರೆ. ಆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಮೈಕ್ ಮೂಲಕ ಎಚ್ಚರಿಕೆ ನೀಡಿ ಗುಂಪನ್ನು ಚದುರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಸ್ಟೇಷನ್ ಮುಂದೆ ಧರ್ಮಸ್ಥಳ ಬೆಂಬಲಿಗರಿಂದ ಪ್ರತಿಭಟನೆ

ಈ ನಡುವೆ ಧರ್ಮಸ್ಥಳ ಪೊಲೀಸ್ ಸ್ಟೇಷನ್ ಮುಂದೆ ಸೇರಿರುವ ಧರ್ಮಸ್ಥಳ ದೇವಸ್ಥಾನದ ಬೆಂಬಲಿಗರು, ಕ್ಷೇತ್ರದ ಹೆಸರನ್ನು ಹಾಳುಗೆಡವಲು ಯತ್ನಿಸಲಾಗುತ್ತಿದೆ. ಕಮ್ಯುನಿಷ್ಟ್ ಪ್ರೇರಿತ ಷಡ್ಯಂತ್ರ ಇದು ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್‌ಪಿ ಹಾಗೂ ಡಿಎಸ್‌ಪಿ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದು, ಧರಣಿ ಕುಳಿತಿದ್ದಾರೆ.

WhatsApp Image 2025 08 06 at 7.54.36 PM
WhatsApp Image 2025 08 06 at 7.48.30 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...