ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

Date:

  • ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್
  • ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ) ಕ್ಕೆ ಸಂಬಂಧಿಸಿ, 11 ವರ್ಷಗಳ ಬಳಿಕ ಆರೋಪಿಯನ್ನು ದೋಷ ಮುಕ್ತಗೊಳಿಸಲಾಗಿದೆ.

ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್‌ನನ್ನು ದೋಷಮುಕ್ತಗೊಳಿಸಿ, ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿ ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ ಎಂದು ಸಿಬಿಐ ನ್ಯಾಯಾಧೀಶ ಸಂತೋಷ್ ಸಿ.ಬಿ ಆದೇಶಿಸಿದ್ದಾರೆ. ಆರೋಪಿ ಸಂತೋಷ್ ರಾವ್ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ವಕೀಲರಾದ ಮೋಹಿತ್ ಕುಮಾರ್, ‘ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಅತ್ಯಾಚಾರ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಸೌಜನ್ಯ ಸತ್ತಾಗ ವಿಪರೀತ ಮಳೆ ಬರುತ್ತಿತ್ತು. ಆಕೆಯ ಬ್ಯಾಗಿನಲ್ಲಿದ್ದ ಪುಸ್ತಕಗಳು ಒದ್ದೆಯಾಗಿರಲಿಲ್ಲ. ಅದೇ ದಿನ 500 ಜನ ಹುಡುಕಾಟ ನಡೆಸಿದ್ದರೂ ಕೂಡ ಯಾರಿಗೂ ಪತ್ತೆಯಾಗಿರಲಿಲ್ಲ. 50 ಮೀಟರ್ ಅಂತರದಲ್ಲಿ ಟೆಂಟ್‌ನಲ್ಲಿ ವಾಸ ಎಂದು ಅನುಮಾನ ವ್ಯಕ್ತಪಡಿಸಿ ಸಂತೋಷ್ ರಾವ್‌ನನ್ನು ಬಂಧಿಸಲಾಗಿತ್ತು. ಅಲ್ಲೇ ಹತ್ತಿರದಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ವಿಡಿಯೋ ಸಂಗ್ರಹಿಸಿಲ್ಲ. ಪೋಸ್ಟ್ ಮಾರ್ಟಂ ರಾತ್ರೋರಾತ್ರಿ ಮಂದಬೆಳಕಿನಲ್ಲಿ ಮಾಡಿದ್ದಾರೆ’ ಎಂಬ ಎಲ್ಲ ಅಂಶಗಳನ್ನು ಇಟ್ಟುಕೊಂಡು ವಾದ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಚಿಕ್ಕಬಳ್ಳಾಪುರ | 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ; ಶಿಕ್ಷಕಿ ವಿರುದ್ಧ ಎಫ್‌ಐಆರ್

ಧರ್ಮಸ್ಥಳದ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ 2012ರ ಅ.9ರಂದು ಉಜಿರೆಯ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ತೆರಳುವಾಗ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಎಂಬಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ. ಹಾಗಾದರೆ, ಆಕೆಯನ್ನು ಕೊಂದವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...