ಧರ್ಮಸ್ಥಳ | ಯೂಟ್ಯೂಬರ್‌ ಮೇಲಿನ ಹಲ್ಲೆ ಖಂಡಿಸಿ ಇಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ, ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆ

Date:

ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ. ಗುರುವಾರ ಸಂಜೆ 5 ಗಂಟೆಗೆ ತಿಮರೋಡಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕರಣೆ ನೀಡಿರುವ ಮಹೇಶ್‌ ಶೆಟ್ಟಿ ತಿಮರೋಡಿ, “ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ನಡೆಸುತ್ತಿರುವ ತನಿಖೆಯ ಸಮಯದಲ್ಲಿ, ನಮ್ಮ ಕಾರ್ಯಕರ್ತರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಧರ್ಮಸ್ಥಳದ ಡಿ. ಗಂಗಾ ಅವರ ಪ್ರಚೋದನೆಯಿಂದ ಕೆಲವು ಪುಂಡರು ದಾಂಧಲೆ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬುಧವಾರ, ಎಸ್‌ಐಟಿ ತನಿಖೆ ಮತ್ತು ನ್ಯಾಯ ಚಳುವಳಿಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳಾದ ಕುಡ್ಲಾ ರಾಂಪೇಜ್‌ನ ಅಜಯ್ ಅಂಚನ್, ಸಂಚಾರಿ ಸ್ಟುಡಿಯೋದ ಸಂತೋಷ್ ಮತ್ತು ಯುನೈಟೆಡ್ ಮೀಡಿಯಾದ ಅಭಿಷೇಕ್ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ. ಈ ಹೇಯ ಕೃತ್ಯವನ್ನು ಖಂಡಿಸಿ, ತಿಮರೋಡಿಯಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೂಂಡಾಗಳ ಹಲ್ಲೆಯಿಂದ ಗಾಯಗೊಂಡ ಯೂಟ್ಯೂಬರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯೂಟ್ಯೂಬರ್‌ಗಳ ಮೇಲಿನ ದಾಳಿಯ ನಂತರ, ಧರ್ಮಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾರವಣ ಸೃಷ್ಟಿಯಾಗಿದೆ. ಹಲ್ಲೆಗೈದ ದುಷ್ಕರ್ಮಿಗಳ ವಿರುದ್ಧ ಧರ್ಮಸ್ಥಳ ಮತ್ತು ಉಜಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...