ಧಾರವಾಡ | 10,780 ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಿದ ಕಾರ್ಮಿಕ ಇಲಾಖೆ

Date:

ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಲ್ಲದೇ ಇದ್ದರೂ ನೋಂದಣಿ ಮಾಡಿಕೊಂಡ 10,780 ಮಂದಿಯನ್ನು ಕಾರ್ಮಿಕ ಇಲಾಖೆ ಪತ್ತೆ ಮಾಡಿ, ಅವರು ಹೊಂದಿದ್ದ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್ ಮಾಹಿತಿ ನೀಡಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟಡ ಕಾರ್ಮಿಕರಿಗಾಗಿ ಇಲಾಖೆಯಿಂದ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇವು ಅರ್ಹರಿಗೆ ಸಿಗಬೇಕೆಂದು ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಆದರೂ, ಕೆಲವರು ಸುಳ್ಳು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರೆಂದು ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳ ಪರಿಶೀಲನೆ, ದೂರವಾಣಿ ಮೂಲಕ ನಡೆಸಿದ ವಿಚಾರಣೆ ವೇಳೆ ಇವರು ಕಾರ್ಮಿಕರಲ್ಲವೆಂದು ತಿಳಿದುಬಂದಿದೆ. ಒಂದು ವೇಳೆ, ಇವರು ಸರ್ಕಾರದಿಂದ ಅನುಕೂಲ ಪಡೆದ ಫಲಾನುಭವಿಗಳಾಗಿದ್ದರೆ, ಎಫ್ಐಆರ್ ದಾಖಲಿಸಲಾಗುತ್ತಿತ್ತು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಕಾರ್ಮಿಕರು ಈ ಹಿಂದೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗಾಗಿ ಅರ್ಜಿ ಸಲ್ಲಿಸಬೇಕಿತ್ತು. ಈಗ ಕಾರ್ಮಿಕ ಇಲಾಖೆಗಾಗಿಯೇ ಹೊಸ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದು, ಮೂರು ತಿಂಗಳಿಂದ ಇದು ಕಾರ್ಯನಿರ್ವಹಿಸುತ್ತಿದೆ. ಇನ್ಮುಂದೆ ಯಾರಾದರೂ ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದರೆ, ಅವರ ಆಧಾರ್ ಕಾರ್ಡ್ ಮಾಹಿತಿ ದಾಖಲಿಸಿ, ಮತ್ತೊಮ್ಮೆ ಅರ್ಜಿ ಸಲ್ಲಿಸದಂತೆ ತಡೆಹಿಡಿಯಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...