ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಇಎಲ್‌ಸಿ ಮತ್ತು ಮಾನವ ಹಕ್ಕುಗಳ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ. ರಾವಸಾಬ್ ಆರ್ ಪೂಜೇರಿ, ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ ಕುರಿತು ಹಾಗೂ ಮಾನವೀಯ ಮೌಲ್ಯಗಳನ್ನು ರಕ್ಷಿಸುವಲ್ಲಿ ಮಾನವ ಹಕ್ಕುಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕ ವರ್ಗದವರಿಗೆ ಮಾಹಿತಿ ನೀಡಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎನ್.ಬಿ. ನಾಲತವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾನವ ಹಕ್ಕುಗಳ ಕುರಿತು ವಿದ್ಯಾರ್ಥಿಗಳು ಹೊಂದಿರಬೇಕಾದ ಜವಾಬ್ದಾರಿ ಮತ್ತು ಜಾಗೃತಿಯ ಬಗ್ಗೆ ಮಾತನಾಡಿದರು.
ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ. ಸುರೇಶ್ ಬಸರಿಕಟ್ಟಿ ನಿರೂಪಿಸಿದರು. ಕಾರ್ಯಕ್ರಮದ ಆರಂಭದಲ್ಲಿ, ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮುಬಾರಕ್ ಮುಲ್ಲಾ ಅವರು ಕುರಾನ್ ಪಠಣದ ಮೂಲಕ ಶುಭ ಕೋರಿದರು. ಪ್ರಾರಂಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಾಗರಾಜ್ ಕಣಕನೆ ಸ್ವಾಗತಿಸಿ, ಉಪನ್ಯಾಸ ನೀಡಲು ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.
ಇದನ್ನೂ ಓದಿ ಧಾರವಾಡ | ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ
ಶಿಕ್ಷಣಶಾಸ್ತ್ರ ವಿಭಾಗದ ಅಧ್ಯಾಪಕಿ ಡಾ. ಎಸ್ ಕೆ ಜಾಧವ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮೇಟಿ ರುದ್ರೇಶ, ಉರ್ದು ವಿಭಾಗದ ಮುಖ್ಯಸ್ಥ ಡಾ. ಬಿಬಿಆಯಿಶಾ ಚಕೋಲಿ ಮತ್ತು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಪ್ರೊ. ಬಾನುಬಿ ನದಾಫ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.





