ಧಾರವಾಡ | ಬೇಂದ್ರೆ ನಗರ ಸಾರಿಗೆ ಬಸ್ ರದ್ದುಗೊಳಿಸಿ: ಸಂಸದ ಜಗದೀಶ್ ಶೆಟ್ಟರ್ ಆಗ್ರಹ

Date:

ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಗಳ ಸಂಚಾರ ರದ್ದುಗೊಳಿಸಲೇಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹ ಮಾಡಿದ್ದಾರೆ.

ಅವಳಿ ನಗರದಲ್ಲಿ ಸಂಚರಿಸುವ ಬೇಂದ್ರೆ ಬಸ್ ಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಶೆಟ್ಟರ್, ಮಿಶ್ರ ಸಂಚಾರ ಮಾರ್ಗದಲ್ಲಿ ಬೇಂದ್ರೆ ಬಸ್‌ಗಳಿಂದಾಗಿಯೇ ಸಮಸ್ಯೆಯಾಗುತ್ತಿದೆ. ಬೇಂದ್ರೆ ಬಸ್‌ಗಳು ಹಾಗೂ ಅವಳಿ ನಗರದ ಮಧ್ಯೆ ಸಂಚರಿಸುವ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳ ಸ್ಪೀಡ್ ಸ್ಪರ್ಧೆಯಿಂದಾಗಿ ಸಂಚಾರ ಸಮಸ್ಯೆಯಾಗುತ್ತಿದೆ. ಟ್ರಾಫಿಕ್ ಜಾಮ್ ಆಗಲು ಬೇಂದ್ರೆ ಬಸ್‌ಗಳೇ ಮುಖ್ಯ ಕಾರಣವಾಗಿವೆ. ಬೇಂದ್ರೆ ಬಸ್‌ಗಳನ್ನು ಎಲ್ಲಿ ಬೇಕಾದಲ್ಲಿ ನಿಲುಗಡೆ ಮಾಡುತ್ತಾರೆ. ಹಲವು ಬಾರಿ ಅವರಿಗೆ ಸೂಚನೆ ನೀಡಿದರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಬೇಂದ್ರೆ ಸಾರಿಗೆ ರದ್ದುಪಡಿಸಬೇಕು ಎಂದು ತಿಳಿಸಿದ್ದಾರೆ.

ಬೇಂದ್ರೆ ಸಾರಿಗೆಯನ್ನು ಉಳಿಸುವ ಲಾಬಿಯೊಂದು ಕೆಲಸ ಮಾಡುತ್ತಿದೆ ಎನಿಸುತ್ತದೆ. ಆ ಕಾರಣದಿಂದ ಎಷ್ಟೇ ಸಮಸ್ಯೆಗಳಾದರೂ ಬೇಂದ್ರೆ ಸಾರಿಗೆ ರದ್ದು ಮಾಡುತ್ತಿಲ್ಲ. ಬಿಆರ್‌ಟಿಎಸ್ ಸಾರಿಗೆ ಇದ್ದರೂ ಬೇಂದ್ರೆ ಸಾರಿಗೆಯನ್ನು ಯಾಕೆ ರದ್ದು ಮಾಡುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಲಿ. ಬೇಂದ್ರೆ ಸಾರಿಗೆಯನ್ನು ರದ್ದುಪಡಿಸಲು ಈಗಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ವ್ಯಕ್ತಿ ಸಾವು

ಜನರ ಒಳಿತಿಗಾಗಿ ಬಿಆರ್‌ಟಿಎಸ್ (ಚಿಗರಿ ಬಸ್) ಯೋಜನೆ ಜಾರಿಗೊಳಿಸಲಾಗಿದೆ. ಅದಕ್ಕೆ ಪೂರಕವಾಗಿ ಅವಳಿ ನಗರದ ಮಧ್ಯೆ ಬೇರೆ ಯೋಜನೆ ಜಾರಿಗೊಳಿಸಲು ಸಚಿವ ಸಂತೋಷ ಲಾಡ್ ಮುಂದಾದರೆ ಯಾವುದೇ ಸಮಸ್ಯೆಯಿಲ್ಲ. ಆದರೆ, ಜನರ ಅಭಿಪ್ರಾಯ ಪಡೆದು ಯೋಜನೆ ಜಾರಿಗೊಳಿಸುವುದು ಸೂಕ್ತ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...