ಧಾರವಾಡ | ಅಂಬೇಡ್ಕರ್ ಚಿತ್ರಕ್ಕೆ ಮಲ ಬಳಿದು ಅಪಮಾನ; ನವೀದ್ ಮುಲ್ಲಾ ಖಂಡನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಭಾವಚಿತ್ರವಿದ್ದ ಬ್ಯಾನರ್‌ಗಳನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಿದ್ದಲ್ಲದೇ ಅಲ್ಲಿದ್ದ ನಾಮಫಲಕಗಳಿಗೆ ಮಲ ಬಳಿದು ಅಪಮಾನಿಸಿ ವಿಕೃತಿ ಮೆರೆದಿದ್ದನ್ನು‌ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ್ ಮುಲ್ಲಾ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಕಿಡಿಗೇಡಿಗಳು ಅಂಬೇಡ್ಕರ್ ಬ್ಯಾನರ್‌ಗಳನ್ನು ಬ್ಲೇಡ್ ಹಾಗೂ ಚಾಕುವಿನಿಂದ ಹರಿದು ವಿರೂಪಗೊಳಿಸಿದ್ದಲ್ಲದೇ ಫಲಕದಲ್ಲಿರುವ ಬಾಬಾಸಾಹೇಬರ ಭಾವಚಿತ್ರಕ್ಕೆ ಮಲ ಬಳಿದಿರುವ ದೃಶ್ಯಗಳು ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಹಾ ಮಾನವತಾವಾದಿ ಮೇಲೆ ಇಂತಹ ಹೀನ ಕೃತ್ಯ ಎಸಗಿದ್ದನ್ನು ಯಾವ ಭಾರತೀಯನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ.

IMG 20250420 150948

ಸ್ಥಳೀಯ ಸಾಮರಸ್ಯ, ಸೌಹಾರ್ದವನ್ನು ಕೆಡಿಸಲು ಈ ಹೀನ ಕೃತ್ಯ ಮಾಡಿದ್ದಾರೆ. ಇದನ್ನು ಯಾರೇ ಎಸಗಿರಲಿ ಅಂತಹವರನ್ನು ಆದಷ್ಟು ಬೇಗ ಬಂಧಿಸಿ ಕಠೀಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಅಲ್ಲಿಯ ಪೋಲಿಸ್ ವರಿಷ್ಠಾಧಿಕಾರಿಗೆ ನವೀದ್ ಮುಲ್ಲಾ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...