ಧಾರವಾಡ | ಅಲೆಮಾರಿಗಳನ್ನು ತಾತ್ಕಾಲಿಕವಾಗಿ ನೆಲೆಸಿರುವ ಸ್ಥಳಗಳಿಂದ ಒಕ್ಕಲೆಬ್ಬಿಸದಂತೆ ಮನವಿ

Date:

ಪೌರಾಡಳಿತ ಇಲಾಖೆಯಿಂದ ನಗರೋತ್ಥಾನ ಯೋಜನೆಯಡಿ ಧಾರವಾಡದ ಕಲಘಟಗಿ ಪಟ್ಟಣ ಪಂಚಾಯತ ಕಟ್ಟಡ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ನಗರದಲ್ಲಿ ಮೀಸಲಿರುವ ಜಾಗದಲ್ಲಿ ಅಲೆಮಾರಿ ಜನಾಂಗದವರು ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಸ್ಥಳದಿಂದ ಅವರನ್ನು ಒಕ್ಕಲೆಬ್ಬಿಸದಂತೆ ಸಚಿವ ಸಂತೋಷ್‌ ಲಾಡ್‌ಗೆ ಮನವಿ ಮಾಡಲಾಗಿದೆ.

ಸ್ಥಳ ಒತ್ತುವರಿಯನ್ನು ಪಟ್ಟಣ ಪಂಚಾಯತ ಅಧಿಕಾರಿಗಳು ಇತ್ತೀಚೆಗೆ ತೆರವುಗೊಳಿಸಿದ್ದರು. ಈ ಕುರಿತು ಕಲಘಟಗಿ ಪಟ್ಟಣದಲ್ಲಿ ಸಂತ್ರಸ್ಥರಿಂದ ಸಚಿವ ಸಂತೋಷ ಲಾಡ್ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, “ಈಗಾಗಲೇ ಹಲವು ಬಾರಿ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ಮನೆ ಹೊಂದಲು ಪಟ್ಟಣ ಪಂಚಾಯತಿಗೆ ಮನವಿ ಸಲ್ಲಿಸಲು ಸೂಚಿಸಲಾಗಿತ್ತು. ಆದರೆ ಯಾರು ಸಹ ಇಲ್ಲಿವರೆಗೆ ಮನೆ ಕೇಳಿ ಅರ್ಜಿ ಸಲ್ಲಿಸಿಲ್ಲ. ಪಟ್ಟಣದ ಖಾಲಿ ಇರುವ ಜಾಗಗಳಲ್ಲಿ ಈ ರೀತಿ ಗುಡಿಸಲು ಹಾಕಿರುವುದು ತಪ್ಪು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ, ಸರಕಾರಿ ಕಟ್ಟಡಗಳಿಗೆ ಮೀಸಲಿಟ್ಟು ಸ್ಥಳ ಒತ್ತುವರಿ, ಅನಧಿಕೃತ ಬಳಕೆ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 03 at 7.31.13 AM

ಅನಧಿಕೃತವಾಗಿ ಶೆಡ್ ನಿರ್ಮಿಸಿದ್ದ, ತೆರವುಗೊಳಿಸಿದ ಕುಟುಂಬಗಳಿಗೆ ಗಾಂಧಿನಗರ ಹಾಗೂ ಇತರ ಸ್ಥಳಗಳಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. ಅಲೆಮಾರಿ ಜನಾಂಗದ ಬಾಧಿತ 13 ಕುಟುಂಬಗಳ ವಾಸಸ್ಥಳ ಹಾಗೂ ಇತರ ಅಧಿಕೃತ ದಾಖಲೆಗಳನ್ನು ಪಡೆದುಕೊಂಡು, ಸ್ಥಾನಿಕ ಚೌಕಸಿ ಮಾಡಿಕೊಂಡು ಪಟ್ಟಣ ಪಂಚಾಯತ್ ಆಡಳಿತ‌ ಮಂಡಳಿ ಸಭೆಯಲ್ಲಿ ಅನುಮೋದಿಸಿ, ನಿವೇಶನ ನೀಡಲು ತಕ್ಷಣ ಕ್ರಮ ವಹಿಸಲು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಅಲೆಮಾರಿ ಕುಟುಂಬಗಳು ಈಗ ತಾತ್ಕಾಲಿಕವಾಗಿ ನೆಲೆಸಿರುವ ಸ್ಥಳಗಳಿಂದ ಒಕ್ಕಲೆಬ್ಬಿಸದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಅರ್ಹರಿಗೆ ಆದಷ್ಟು ಬೇಗ ನಿವೇಶನ ನೀಡಲು ಕ್ರಮವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ತಹಶೀಲ್ದಾರ ಬಸವರಾಜ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ. ಬಿ. ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...