ಧಾರವಾಡ | ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ ಚೀಟಿಗಳಿಗೊಂದು ಒಟ್ಟು 3 ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮುಖಾಂತರ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ ಎಂದು ತಿಳಿಸಲಾಗಿದೆ.

ರಾಜ್ಯ ಸರ್ಕಾರ ಸ್ವಾಮ್ಯದ ನಿಗಮಗಳು, ಕಂಪನಿಗಳು ಅಥವಾ ನಗರ ಸ್ಥಳೀಯ ಸಂಸ್ಥೆಗಳು, ಸಹಕಾರ ಸಂಘಗಳ ಕಾಯ್ದೆ 1959 ರಡಿ ನೊಂದಾವಣೆಗೊಂಡಿರುವ ವಿವಿಧ ಸಹಕಾರ ಸಂಘಗಳು, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾನ್ಯತೆ ಪಡೆದ ಸ್ತ್ರೀಶಕ್ತಿ ಗುಂಪು ಮತ್ತು ಮಹಿಳಾ ಸ್ವಸಹಾಯ ಗುಂಪು ಹಾಗೂ ಬೆಂಚ್‍ಮಾರ್ಕ ವಿಕಲಚೇತನರ ವ್ಯಕ್ತಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ವರ್ಗದ ವೈಯಕ್ತಿಕ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ನಮೂನೆಗಳನ್ನು ಹುಬ್ಬಳ್ಳಿ ಲ್ಯಾಮಿಂಗಟನ್ ಶಾಲೆ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಪಡೆದು, ನವೆಂಬರ್ 13, 2025 ರ ಸಂಜೆ 5:30 ರೊಳಗಾಗಿ ಧಾರವಾಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಾ. ವಿನೋದ ಹೆಗ್ಗಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...