ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಗಣಿತ ವಿಷಯ ಬೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನದ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತಿ ಇರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.
ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 21ರೊಳಗಾಗಿ ಹುಬ್ಬಳ್ಳಿ ಘಂಟಿಕೇರಿ ಬಾಲಕಿಯರ ಸರಕಾರಿ ಬಾಲಮಂದಿರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2363388 ಗೆ ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ ಬಾಲಕಿಯರ ಸರ್ಕಾರಿ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಧಾರವಾಡ | ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿ: ಭುವನೇಶ್ ಪಾಟೀಲ





