ಧಾರವಾಡ | ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Date:

ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯು 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‍ನಲ್ಲಿ ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ,  ಸೇವಾಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ-ಕಿಸಾನ್ ಪೋರ್ಟಲ್‍ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.

ಆಸಕ್ತ ರೈತರು, ರೈತ ಮಹಿಳೆಯರು ನವೆಂಬರ್ 29, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಜೋಳ (ಮಳೆ ಆಶ್ರಿತ) ಮತ್ತು ಕಡಲೆ (ಮಳೆ ಆಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲಾ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಕಡಲೆ (ಮಳೆ ಆಶ್ರಿತ) ನಿಗದಿಪಡಿಸಲಾಗಿದೆ. ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಸಂಬಂಧಿಸಿದಂತೆ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲ್ಲೂಕುಗಳಿಗೆ ಕಡಲೆ (ಮಳೆಆಶ್ರಿತ) ಬೆಳೆ ಮತ್ತು ಕಲಘಟಗಿ ತಾಲೂಕಿಗೆ ಜೋಳ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ರಾಜ್ಯಮಟ್ಟದ ಮಿನಿ ಓಲಂಪಿಕ್ಸ್; 26 ಪದಕ ಪಡೆದ ಜಿಲ್ಲಾ ಕ್ರೀಡಾಪಟುಗಳು

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...