ಧಾರವಾಡ | ಸಂತೋಷ ಲಾಡ್‌ಗೆ ಅವಮಾನ; ವಿಜಯೇಂದ್ರ ಕ್ಷಮೆ ಕೇಳಬೇಕು: ಅರವಿಂದ ಏಗನಗೌಡರ ಆಗ್ರಹ

Date:

ಕೀಳು ಮಟ್ಟದ ಪದ ಬಳಸಿ ಸಚಿವರಾದ ಸಂತೋಷ ಲಾಡವರಿಗೆ ಅವಮಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷಮೆ ಕೇಳಬೇಕೆಂದು ಧಾರವಾಡ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯೆಂದ್ರ ಅವರೇ ನಿಮ್ಮ ತಂದೆಯ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿರುವ ನೀವು, ನಿಮ್ಮ ಹೆಸರಿನ ಮುಂದಿರುವ ಯಡಿಯೂರಪ್ಪ ಎಂಬ ಹೆಸರು ತೆಗೆದುಬಿಟ್ಟರೇ ಈ  ರಾಜಕಾರಣದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಹೇಳಿದರು.

ಯಾವುದೇ ಗಾಡ್ ಫಾದರ್‌ಗಳಿಲ್ಲದೇ ತಳಮಟ್ಟದಿಂದ ಹಂತಹಂತವಾಗಿ ಬೆಳೆದ ಸಂತೋಷ್ ಲಾಡ್ ಅವರ ಬಗ್ಗೆ ಮಾತಾಡೋಕೆ ನಿಮಗೆ ಅರ್ಹತೆ ಹಾಗೂ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಸಾಮಾನ್ಯ ಕಾರ್ಪೊರೇಟರ್‌ ಗಿರಿಯಿಂದ ಹಿಡಿದು ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಚಿವಗಿರಿಯವರೆಗೆ ಸ್ವಂತ ಬಲದ ಮೇಲೆ ಬೆಳೆದ ನಾಯಕರಾದ ಸಂತೋಷ್ ಲಾಡ ಎಂಬುದು ಮರೆಯಬೇಡಿ ಎಂದರು.

ಲಾಡ್ ಸ್ವಂತ ಹಣದಲ್ಲಿ ಸಾವಿರಾರು ಬಡಜನರ, ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ತಮ್ಮ ಹಾಗೆ ಕೋವಿಡ್ ಸಮಯದಲ್ಲಿ ಮಾಸ್ಕ್-ಸ್ಯಾನಿಟೈಸರ್ ಹಗರಣ ಮಾಡಿ ಸಾವಿರಾರು ಕೋಟಿ ಲೂಟಿ ಹೊಡೆದು, ಜನರ ಹೆಣದ ಮೇಲೆ ರಾಜಕಾರಣ ಮಾಡಿದವರಲ್ಲ ಎಂಬುದು ರಾಜ್ಯಕ್ಕೇ ತಿಳಿದ ಸಂಗತಿ ಎಂದರು.

ಅವರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು‌ ನಿಮ್ಮ ರಾಷ್ಟ್ರ ನಾಯಕರಿಗೆ ಆಗುತ್ತಿಲ್ಲ, ಇದರಿಂದ ಹತಾಶೆಗೊಂಡಿರುವ ನೀವು ಅವರ ದ್ವನಿ ಹತ್ತಿಕ್ಕಲು ಈ ರೀತಿಯ ಕ್ಷುಲ್ಲಕ ಮಾತುಗಳಾನ್ನಾಡುತ್ತಿದ್ದೀರೆಂದು ಜನಸಾಮಾನ್ಯರಿಗೂ ಗೊತ್ತಾಗಿದೆ. ಈ ಕೂಡಲೆ ಬಿಜೆಪಿ ರಾಜ್ಯಾಧ್ಯಕ್ಷ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...