ಧಾರವಾಡ | ಬಸವಾದಿ ಶರಣರ ಆಶಯದಂತೆ ಮಾತು ಕೃತಿ ಒಂದಾಗಬೇಕು: ಡಾ. ವೀರಣ್ಣ ರಾಜೂರ

Date:

ಬಸವಾದಿ ಶರಣರ ಆಶಯದಂತೆ ನಮ್ಮ ಮಾತು ಕೃತಿ ಒಂದಾಗಬೇಕು, ನಡೆ ನುಡಿ ಸಾಮರಸ್ಯಗೊಳ್ಳಬೇಕು, ಸತ್ಯವೇ ನಮ್ಮ ತಂದೆ ತಾಯಿ, ವಚನ ಸಾಹಿತ್ಯವೇ ನಮ್ಮ ಬಂಧು ಬಳಗ ಸತ್ಯವಾಕ್ಯಕ್ಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮ ಎಂಬುದನ್ನು ಅರಿತು ನಾವೆಲ್ಲರೂ ಬಾಳಿದಾಗ ಮಾತ್ರ ಈ ನಾಡು ಕಲ್ಯಾಣ ರಾಜ್ಯವಾಗುತ್ತದೆ ಎಂದು ಸಂಶೋದಕ ಡಾ.ವೀರಣ್ಣ ರಾಜೂರ ಅಭಿಪ್ರಾಯಪಟ್ಟರು.

ಧಾರವಾಡದಲ್ಲಿ ನಡೆದ ನಿತ್ಯ ವಚನೋತ್ಸವದ ಮಂಗಳೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೈಸೂರಿನ ಡಾ.ಶರತ್‌ಚಂದ್ರ ಸ್ವಾಮೀಜಿ ಮಾತನಾಡಿ, “ಮಾನವನ ಬದುಕು ಅವನ ಮನಸ್ಸಿನ ತಳಹದಿ ಮೇಲೆ ಕಟ್ಟಲ್ಪಟ್ಟಿದೆ. ಅವನ ಎಲ್ಲ ಬಗೆಯ ಚಟುವಟಿಕೆಗಳಿಗೆ ಮನಸೇ ಪ್ರೇರಕ, ತಾರಕ, ಮಾರಕ. ಅದು ಮನುಷ್ಯನ ಅಸ್ತಿತ್ವದ ಮೂಲವಾಗಿದೆ. ಮನಸ್ಸು ಪವಿತ್ರವಾಗುವಂತೆ ಮಾಡಲು ಆಧ್ಯಾತ್ಮದ ಸ್ಪರ್ಶ ನೀಡಬೇಕು. ದೇಹ ಮತ್ತು ಮನಸ್ಸು ಚನ್ನಾಗಿದ್ದರೆ ಸದೃಢ ಸಶಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಬಸವ ಸಂಸ್ಕಾರದ ಅರಿವು ಮೂಡಿಸುವ ಕೆಲಸ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

ನಿವೃತ್ತ ಐಎಎಸ್ ಅಧಿಕಾರಿ ಜಿ ವಿ ಕೊಂಗವಾಡ, ಸಾಹಿತಿ ಜಿ ಎ ತಿಗಡಿ, ಡಾ. ಎಸ್ ಆರ್ ಜಂಬಗಿ, ರವಿಕುಮಾರ ಕಗ್ಗಣ್ಣವರ, ಕಾಂತಿಲಾಲ ಮೆಹತಾ, ಗಿರಿಜಾ ನರೆಗಲ್ ವೇದಿಕೆಯಲ್ಲಿದ್ದರು. ಬಸವ ಕೇಂದ್ರ ಅಧ್ಯಕ್ಷ ಸಿದ್ರಾಮಣ್ಣ ನಡಕಟ್ಟಿ ಆಶಯನುಡಿ ಆಡಿದರು. ಸಂಗೀತಾ ಮಠಪತಿ ನಿರೂಪಿಸಿದರು, ಬಸವಂತ ತೋಟದ ಪ್ರಾಸ್ತಾವಿಕ ಮಾತನಾಡಿದರು, ಶಿವರುದ್ರಗೌಡ ಪಾಟೀಲ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...