ಧಾರವಾಡ | ಕನ್ನಡ ಕಸ್ತೂರಿಯಷ್ಟೇ ಪರಿಮಳವಾದದು: ರೇಣುಕ ಅಮಲಝರಿ

Date:

ಭಾರತೀಯ ಭಾಷೆಗಳಲ್ಲಿ ಬರೆಯಲು, ಓದಲು, ಮಾತನಾಡಲು ಸುಂದರವಾದ ಭಾಷೆ ಕನ್ನಡ ಮಾತ್ರ. ಕನ್ನಡ ನುಡಿ ಕನ್ನಡಿಗರಾಡುವ ಕಸ್ತೂರಿ ಕನ್ನಡ ಭಾಷೆ. ಕಸ್ತೂರಿ ಅಷ್ಟೇ ಪರಿಮಳವಾದದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೇಣುಕ ಅಮಲಝರಿ ಹೇಳಿದರು.

ಕವಿವ ಸಂಘವು ಸಂಘವು 136 ವರ್ಷಗಳಿಂದ ಕನ್ನಡ ಭಾಷೆ, ಸಂಸ್ಕೃತಿಯನ್ನು ಜೀವಂತವಾಗಿ ಉಳಿಯುವಂತೆ ಕಾರ್ಯ ಮಾಡುತ್ತಿದೆ. ಕನ್ನಡ ಕಟ್ಟುವ ಕಾರ್ಯದಲ್ಲಿ ಅನೇಕ ಮಹನೀಯರ ಜೊತೆ ಕವಿವ ಸಂಘದ್ದು ಪ್ರಧಾನ ಪಾತ್ರವಿದೆ. ನಾವು ಯಾವುದೇ ಭಾಷೆ ಕಲಿಯಲು ಅಡ್ಡಿ ಇಲ್ಲ. ಆದರೆ, ಮಾತೃಭಾಷೆ ಕನ್ನಡ ಮಾತ್ರ ಮೊದಲ ಆದ್ಯತೆಯಾಗಬೇಕು. ಭಾಷೆಗೆ ಯಾವುದೇ ಜಾತಿ ಇಲ್ಲ. ಭಾಷೆಯ ಸಂವರ್ಧನೆಗಾಗಿ ನಾವೆಲ್ಲ ಬದ್ಧತೆಯಿಂದ ಕಟ್ಟಾಳಾಗಿ ಕಾರ್ಯ ಮಾಡಬೇಕೆಂದು ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಕೋರಿಶೆಟ್ಟರ ಸನ್ಮಾನ ಸ್ವೀಕರಿಸಿ ಮಾತನಾಡಿ, ನಾನು ಇತಿಹಾಸದ ಸಂಶೋಧನೆಯಲ್ಲಿ ಸಮಾಜಮುಖಿಯಾಗಿ ಕಾರ್ಯ ಮಾಡಿದ್ದರಿಂದ ಸರ್ಕಾರ ನನಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು ಅಭಿಮಾನದ ಸಂಗತಿಯಾಗಿದೆ. ನನ್ನ ತವರು ನಾಡಿನಲ್ಲಿ ಸಿಕ್ಕ ಈ ಗೌರವ ದೊಡ್ಡದು. ಪ್ರಾಕ್ತನ ಇತಿಹಾಸ ಸಂಶೋಧನಾ ಕಾರ್ಯ ತುಂಬಾ ಕಠಿಣ. ಕ್ಷೇತ್ರ ಕಾರ್ಯದ ಸಂದರ್ಭದಲ್ಲಿ ಇತಿಹಾಸದ ಕಾಲ ಗರ್ಭದಲ್ಲಿ ಹುದುಗಿ ಹೋದ ನೆಲೆಗಳನ್ನು, ವೈಜ್ಞಾನಿಕ ತಳಹದಿಯ ಮೇಲೆ ಉತ್ಖನನ ಮಾಡಿ, ಅಲ್ಲಿ ಸಿಗುವ ಪುರಾತತ್ವ ವಸ್ತುಗಳ ಆಧಾರದ ಮೇಲೆ ಆ ಪರಿಸರದ ಸಾಮಾಜಿಕ, ಆರ್ಥಿಕ, ಸ್ಥಿತಿ, ಜನ ಜೀವನವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಜಗಳ; ಚಾಕು ಇರಿತ

ವೇದಿಕೆ ಮೇಲೆ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ಬಾಬಾಜಾನ್ ಮುಲ್ಲಾ ಇದ್ದರು. ಪ್ರಾರಂಭದಲ್ಲಿ ಮುಕ್ತಾ ಕುಲಕರ್ಣಿ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು. ನವರಸ ಸ್ನೇಹಿತರ ವೇದಿಕೆಯಿಂದ ನಾಡು-ನುಡಿ ಹಾಡುಗಳು ಪ್ರೇಕ್ಷಕರನ್ನು ರಂಜಿಸಿದವು. ಕೊನೆಯಲ್ಲಿ ಅನುಶ್ರೀ ಶೆಟ್ಟಿ ತಂಡದಿಂದ ಭರತನಾಟ್ಯ ಪ್ರದರ್ಶನಗೊಂಡಿತು. ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು. ಡಾ ಮಹೇಶ ಧ. ಹೊರಕೇರಿ ವಂದಿಸಿದರು. ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಡಾ ಶೈಲಜಾ ಅಮರಶೆಟ್ಟಿ, ಎಂ.ಎಂ. ಚಿಕ್ಕಮಠ, ಕೆ.ಎಚ್. ನಾಯಕ, ಶಂಕರ ಘಟ್ನಟ್ಟಿ ಕಿರಣ್ ಸಿದ್ದಾಪುರ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...