ಧಾರವಾಡ | ಪ್ರಜಾಪ್ರಭುತ್ವದ ಪ್ರಥಮ ರೂವಾರಿ ಬಸವಣ್ಣ: ಬಸವರಾಜ ಹೊರಟ್ಟಿ

Date:

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ ಜಾತ್ಯತೀತ, ಸಮಸಮಾಜ, ಶೋಷಣೆ ರಹಿತ ಹಾಗೂ ಕಾಯಕ ದಾಸೋಹದ ಕ್ರಾಂತಿಕಾರಿ ತತ್ವ ಆದರ್ಶವನ್ನು ಸಾರಿದ ಬಸವಣ್ಣನವರು ಭಾರತದ ಪ್ರಥಮ ಸ್ವಾತಂತ್ರ ವಿಚಾರವಾದಿ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಾಂಸ್ಕ್ರತಿಕ ಇಲಾಖೆ ಆಶ್ರಯದಲ್ಲಿ ಶನಿವಾರದಂದು  ಕರ್ನಾಟಕದ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವಣ್ಣ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

“ಶೋಷಣೆ ರಹಿತ, ಸಮಸಮಾಜ, ಜಾತ್ಯತೀತ ಮಹಿಳಾ ಸ್ವಾತಂತ್ರತೆಯಂಥ ಕ್ರಾಂತಿಕಾರಿ ಬದಲಾವಣೆಯನ್ನು ತಂದು ಇಡೀ ಜಗತ್ತಿಗೆ ಬಸವಣ್ಣ ಮಾದರಿಯಾದರು” ಎಂದು ಹೊರಟ್ಟಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವಣ್ಣರಂತಹ ಮಹಾನ್ ವ್ಯಕ್ತಿ ಕರ್ನಾಟಕದಲ್ಲಿ ಇದ್ದು, ನಮ್ಮ ನಾಡಿಗೆ ದೊಡ್ಡ ಗೌರವ. ಬಸವಣ್ಣರ ಆಚಾರ, ವಿಚಾರ, ತತ್ವ, ಆದರ್ಶಗಳು ದೇಶಕ್ಕೆ ಹಾಗೂ ಜಗತ್ತಿಗೆ ಪ್ರಚಾರವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಘ ಸಂಸ್ಥೆಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕ್ರತಿಕ ನಾಯಕರೆಂದು ಭಾವಚಿತ್ರ ಹಾಕಿರಿವುದು ಶ್ಲಾಘನೀಯ. ಇದರಿಂದ ಜನಸಾಮಾನ್ಯರಿಗೂ ಬಸವಣ್ಣರ ತತ್ವಗಳು ತಲುಪಲಿವೆ. ಮನೆಯೆ ಮೊದಲ ಪಾಠಶಾಲೆ, ಗೃಹಣಿಯರು ಈ ನಿಟ್ಟಿನಲ್ಲಿ ಬಸವಣ್ಣರ ಅಚಾರ, ವಿಚಾರ, ಸಂಸ್ಕಾರಗಳನ್ನು ಮಕ್ಕಳಿಗೆ ನೀಡಲು ಮುಂದಾಗಬೇಕು” ಎಂದರು.

ಡಾ ಎಂ ಎಂ ಕಲಬುರಗಿ ರಾಷ್ಟ್ರಿಯ ಪ್ರತಿಷ್ಟಾನದ ಅಧ್ಯಕ್ಷ ಡಾ ವೀರಣ್ಣ ರಾಜೂರ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, “ಬಸವಣ್ಣನವರನ್ನು ಈ ಜಗತ್ತು ಕಂಡ ಮೊದಲ ಸ್ವತಂತ್ರ ಧಾರ್ಮಿಕ ಮಹಾ ಮಾನವತಾವಾದಿ. ಅವರ ಕ್ರಾಂತಿ ಆರಂಭಗೊಂಡಿದ್ದು, ಅವರ ಮನೆಯಲ್ಲಿ ಮಹಿಳಾ ಸಮಾನತೆಯ ವೈಚಾರಿಕತೆಯಿಂದ ಆರಂಭಗೊಂಡಿತ್ತು” ಎಂದರು.

“ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‍ಗೆ ಕಾಯಕ ದಾಸೋಹ ಸೂತ್ರದ ಬಜೆಟ್ ಎಂದು ಹೆಸರಿಟ್ಟಿದ್ದು ಅಭಿನಂದನೀಯ. ಗಳಿಕೆ ಹಾಗೂ ಬಳಕೆಯ ಸಮಾನತೆಯನ್ನು ಹೇಗೆ ಸರಿದೂಗಿಸಬೇಕೆಂದು ಬಸವಣ್ಣನ ತತ್ವದ ಮೂಲಕ ಈಗ ತೋರಿಸಿದ್ದಾರೆ” ಎಂದು ಹೇಳಿದರು.

ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಈ ಕಾರ್ಯಕ್ರಮ‌ವನ್ನು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನೈಜ ಹೋರಾಟಗಾರರ ವೇದಿಕೆ ದೂರು; 5 ದಶಕಗಳ ಬಳಿಕ ಗಂಗಸಂದ್ರಕ್ಕೆ ಬಂತು ಕುಡಿಯುವ ನೀರು

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಪ್ರಾಸ್ತಾವಿಕ ನುಡಿಗಳು, “ಉಳ್ಳವರು ಶಿವಾಲಯ ಕಟ್ಟುವರಯ್ಯಾ” ಎಂಬ ಬಸವಣ್ಣನವರ ವಚನ ವಿವರಿಸಿದ್ದು, ಸಭಿಕರಲ್ಲಿ ಚಪ್ಪಾಳೆ ಹಾಗೂ ಸಂತಸ ಮೂಡಿಸಿ ಶ್ಲಾಘನೆ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ, ಬೇಂದ್ರೆ ಪ್ರತಿಷ್ಠಾನದ ಅಧ್ಯಕ್ಷ ಡಿ ಎಂ ಹೀರೆಮಠ, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರ ಹಾಗೂ ಸಮಾಜದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...