ಧಾರವಾಡ | ಕನ್ನೇರಿ ಸ್ವಾಮೀಜಿ ಅಣ್ಣಿಗೇರಿ ತಾಲೂಕು ಪ್ರವೇಶಿಸದಂತೆ ಬಸವಪರ ಸಂಘಟನೆಗಳ ಆಗ್ರಹ

Date:

ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿ ಅಣ್ಣಿಗೇರಿ ತಾಲೂಕನ್ನು ಪ್ರವೇಶಿಸದಂತೆ ಪ್ರತಿಬಂಧಕ ಆಜ್ಞೆಯನ್ನು ಜಾರಿ ಮಾಡಬೇಕೆಂದು, ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕು ಘಟಕ ಮತ್ತು ಬಸವಪರ ಸಂಘಟನೆಗಳ ವತಿಯಿಂದ ತಹಶೀಲ್ದಾರರಿಗೆ ಮನವಿಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ.

ಲಿಂಗಾಯತ ಮಠಾಧೀಶರ ಒಕ್ಕೂಟ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನ ರಾಜ್ಯದಲ್ಲೆಡೆ ಯಶಸ್ವಿಯಾಗಿ ನಡೆದಿದ್ದು, ಬಸವ ಸಂಸ್ಕೃತಿ ಅಭಿಯಾನ ಕುರಿತು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಟೀಕಿಸುತ್ತ, ಇದು ಮುಖ್ಯಮಂತ್ರಿ ಕೃಪಾಪೋಷಿತ ನಾಟಕ ಮಂಡಳಿಯಾಗಿದೆ. ಅಭಿಯಾನ ಆಯೋಜಿಸಿದ್ದ ಲಿಂಗಾಯತ ಮಠಾಧಿಪತಿಗಳ ಕುರಿತು ಈ ಸೂ…. ಮಕ್ಕಳಿಗೆ ನಾನ ಹೇಳಿದ್ರ ಹೇಳಬೇಕು. ಈ ಮಕ್ಕಳಿಗೆ ….ನಿಂದ ಹೊಡೆಯಬೇಕು ಎಂದು ಅಸಭ್ಯ, ಅಶ್ಲೀಲ, ಅವ್ಯಾಚ್ಯ, ಕೀಳುಮಟ್ಟದ ಭಾಷೆಯಲ್ಲಿ ನಿಂದಿಸಿದ್ದು ಇಡೀ ನಾಡಿನ ಬಸವಭಕ್ತರಿಗೆ ತೀವ್ರ ನೋವನ್ನುಂಟು ಮಾಡಿದೆ, ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಸರ್ವೋಚ್ಚ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಸಹಜಾನಂದ ಮಹಾರಾಜರ ಸಪ್ತಾಹದ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲು ನವಂಬರ್ 7, ರಂದು ಆಗಮಿಸಲಿದ್ದು, ಆ ಸಮಾರಂಭದ ಬಗ್ಗೆ ನಮ್ಮ ಯಾವುದೇ ತಂಟೆ ತಕರಾರುಗಳಿಲ್ಲ. ಅದು ಅತ್ಯಂತ ಯಶಸ್ವಿಯಾಗಿ ಜರುಗಲು ನಮ್ಮ ತುಂಬು ಹಾರೈಕೆ ಇದೆ. ಆದರೆ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಈ ಸಮಾರಂಭದಲ್ಲಿ ಭಾಗವಹಿಸಲು ಹಾಗೂ ಅಣ್ಣಿಗೇರಿ ತಾಲೂಕನ್ನು ಪ್ರವೇಶಿಸಲು ನಮ್ಮ ತೀವ್ರ ವಿರೋಧವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ವರ್ಷಗಳ ಹಿಂದೆ ಶ್ರೀರಾಮ ಸೇನೆಯ ಪ್ರಮೋದ ಮುತಾಲಿಕರನ್ನು ತಾಲೂಕಿನ ಹಳ್ಳಿಕೇರಿ ಗ್ರಾಮಕ್ಕೆ ಕರೆಯಿಸಿದಾಗ ಅಶಾಂತಿ, ಗಲಾಟೆ ಉಂಟಾಗಿ ಮೂರು ಕೊಲೆಗಳಾಗಿದ್ದು ಈಗಾಗಲೇ ಗೊತ್ತಿರುವ ವಿಷಯ. ಈ ಕಾರಣದಿಂದ ತಾಲೂಕಿನಲ್ಲಿ ಹಳ್ಳಿಕೇರಿ ಗ್ರಾಮ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿದೆ. ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ಅಣ್ಣಿಗೇರಿ ತಾಲೂಕಿಗೆ ಪ್ರವೇಶಿಸಬಾರದು ಎಂದು ನಿರ್ಬಂಧಿಸಿ ಶಾಶ್ವತವಾಗಿ ಆದೇಶ ಮಾಡಲು ವಿನಂತಿಸುತ್ತೇವೆ. ತಾವು ಈ ಕೂಡಲೇ ಆದೇಶ ಮಾಡದಿದ್ದರೆ ಮುಂದೆ ನಡೆಯುವ ಘಟನೆಗಳಿಗೆ ಸರಕಾರವೇ ಜವಾಬ್ದಾರಿಯಾಗುತ್ತದೆ. ತಾವು ಅವರ ಪ್ರವೇಶವನ್ನು ತಾಲೂಕಿಗೆ ನಿರ್ಬಂಧಿಸಿ ಮುಂದಾಗುವ ಸಂಭವನೀಯ ಅನಾಹುತಗಳನ್ನು ತಡೆಗಟ್ಟಲು ಆದೇಶ ಹೊರಡಿಸುತ್ತೀರೆಂದು ಅದಮ್ಯ ವಿಶ್ವಾಸ ಹೊಂದಿದ್ದೇವೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...