ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ 16 ವರ್ಷದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಬಾಲಕನು ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.
ಪೂಜಾರ ಓಣಿಯ ನಿವಾಸಿಯಾದ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಮೃತ ಬಾಲಕನೆಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.
ಇದನ್ನೂ ಓದಿ ಧಾರವಾಡ | ‘ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಮಾರ್ಗ’ ನಾಮಫಲಕ ಮರುಸ್ಥಾಪಿಸಲು ಒತ್ತಾಯ
ತಕ್ಷಣ ಕುಂದಗೋಳ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆ ಮುಂದುವರಿದಿದೆ.





