ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಣಕಲ್ ಚಿಗರಿ ರಸ್ತೆಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್, ಧಾರವಾಡದ ಕಡೆಯಿಂದ ಬರುತ್ತಿದ್ದ ನೆಕ್ಸಾನ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ ಕ್ಯಾಲೆಂಡರ್ ಬದಲಾದರೂ ಬದಲಾಗಲೊಲ್ಲದ ಮನಸುಗಳು; ಸಮಾನತೆಯ ಪಾಠ ಕೊಟ್ಟ ನಾಡು ಮಾಡುತ್ತಿರುವುದೇನು?
ಮೃತ ವ್ಯಕ್ತಿಯನ್ನು ಧಾರವಾಡದ ರೆಡ್ಡಿ ಕಾಲೋನಿ ನಿವಾಸಿ ಗಿರೀಶ್ ಬಣವಿ (60) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





