ಧಾರವಾಡ | ಉದ್ಯಮಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: ಪೊಲೀಸರು ಹೇಳಿದ್ದೇನು?

Date:

ಇತ್ತೀಚಿಗೆ ಧಾರವಾಡದ ಗರಗ ಗ್ರಾಮದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಕರಡಿಗುಡ್ಡ ಎಂಬುವವರ ಕೊಲೆಯಾದ ಹಿನ್ನೆಲೆಯಲ್ಲಿ ಪ್ರಕರಣದ 48ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಗರಗ ಠಾಣಾ ಪೊಲೀಸರು ಯಶಸ್ವಿ ಆಗಿದ್ದಾರೆ.

ಮೃತ ಉದ್ಯಮಿ ಗಿರೀಶ್ ಅವರ ಮಗಳನ್ನು ಚುಡಾಯಿಸುತ್ತಿದ್ದ ನಾಲ್ವರಿಗೆ ತಾಕೀತು ಮಾಡಿದ್ದರು. ಆ ಸೇಡಿನಲ್ಲಿ ಪ್ರಮುಖ ಆರೋಪಿ ಖಂಡೋಬಾ ಪಟದಾರಿ ಜೊತೆಗೂಡಿ ಮಂಜುನಾಥ ಚಿಕ್ಕೊಪ್ಪ, ಪ್ರಜ್ವಲ ವಡ್ಡರ ಮತ್ತು ಆಕಾಶ ಮಾದಪ್ಪನವರ ನಾಲ್ವರು ಸೇರಿ ಮನೆಯಲ್ಲಿ ಗಿರೀಶ್ ಒಬ್ಬರೆ ಕುಳಿತಿದ್ದ ಸಂದರ್ಭವನ್ನು ಗಮನಿಸಿ ಏಕಾಏಕಿ ಮಾರಕಾಸ್ತ್ರಗಳಿಂದ ಎಲ್ಲೆಂದರಲ್ಲಿ ಚುಚ್ಚಿ ಹತ್ಯೆ ಮಾಡಿದ್ದಾರೆ ಎಂದು ಸಬ್ ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.

ಉದ್ಯಮಿ ಗಿರೀಶ್ ಕೊಲೆಯಾದ ಸಂದರ್ಭದಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಮತ್ತು ಕೊಲೆಯಾದ ಕಾರಣವೂ ಯಾರಿಗೂ ತಿಳಿದಿರಲಿಲ್ಲ. ಕೌಟುಂಬಿಕ ಕಲಹದಿಂದ ಕೊಲೆಯಾಗಿದೆ ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ ಎಂದು ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾಧ್ಯಮಗಳ‌ಮುಂದೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಬೆಳಗಾವಿ | ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಎಎಸ್ಐ ಅಧಿಕಾರಿ

ಈ ಕುರಿತು ಗರಗ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸಮೀರ್ ಮುಲ್ಲಾ ನೇತೃತ್ವದ ತಂಡವು ಎಲ್ಲಾ ಆಯಾಮಗಳಿಂದ ನಿರಂತರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...